Advertisement
ಜತೆಗೆ ಕಾಡಗೊಂಡನಹಳ್ಳಿ ಪೊಲೀಸ್ ಠಾಣೆಗೆ ದಿಗ್ಬಂಧನ ಹಾಕಿರುವ ಗುಂಪು, ಶಾಸಕರು ಹಾಗೂ ಅವರ ಸಂಬಂಧಿ ನವೀನ್ ಮನೆ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಬೆಂಕಿ ಹಚ್ಚಿದೆ. ಪೊಲೀಸರತ್ತ ಕಲ್ಲು ತೂರಾಟ ನಡೆಸಿರುವ ಉದ್ರಿಕ್ತರು ಆರೋಪಿ ಠಾಣೆಯಲ್ಲಿದ್ದಾನೆ ಎಂದು ಆರೋಪಿಸಿ ಕೆಲವು ಪೊಲೀಸರಿಗೆ ಹಲ್ಲೆ ನಡೆಸಿದ್ದಾರೆ. ಇದರಿಂದ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸರು ಉದ್ರಿಕ್ತರತ್ತ ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸಿದ್ದಾರೆ.
Related Articles
ಅಲ್ಲದೆ, ನೂರಾರು ಮಂದಿ ಸ್ಥಳೀಯರು ಕೆ.ಜಿ.ಹಳ್ಳಿ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತ ಗುಂಪನ್ನು ಚದುರಿಸಲು ಹರಸಾಹಸ ಪಡುತ್ತಿದ್ದ ಪೊಲೀಸರು, ‘ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೊಲೀಸರ ಕರ್ತವ್ಯಕ್ಕೆ ಅವಕಾಶ ನೀಡಿ. ಎಲ್ಲರೂ ಮನೆಗಳಿಗೆ ತೆರಳಿ’ ಎಂದು ಮನವಿ ಮಾಡಿದರು. ಆದರೂ ಕೆಲವರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
Advertisement
ಆಗ ಅನಿವಾರ್ಯವಾಗಿ ಪೊಲೀಸರು ಗುಂಪು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ಪೊಲೀಸರು ಠಾಣೆಯಿಂದ ಹೊರಗೆ ಬರದಂತೆ ಪ್ರತಿಭಟನಾಕಾರರು ಜಮಾಯಿಸಿದ್ದರಿಂದ ಅಕ್ಕ ಪಕ್ಕದ ಠಾಣೆಗಳಿಂದ ಹೆಚ್ಚುವರಿ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು.ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಶಾಸಕ ಜಮೀರ್ ಅಹ್ಮದ್, ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿ ಪ್ರತಿಭಟನಾ ನಿರತರ ಜತೆ ಮಾತುಕತೆ ನಡೆಸಿದರು. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಗುರುತಿಸಿದ್ದಾರೆ. ಸದ್ಯದಲ್ಲೇ ಅವರನ್ನು ಬಂಧಿಸುತ್ತಾರೆ. ಆರೋಪಿಗಳ ಬಂಧನಕ್ಕೆ ಮೂರು ಪೊಲೀಸರ ತಂಡ ತೆರಳಿದೆ ಎಂದು ಶಾಸಕ ಜಮೀರ್ ಪ್ರತಿಭಟನಾ ನಿರತರಿಗೆ ಮನವರಿಕೆ ಮಾಡಿಕೊಡಲು ತಿಳಿಸಿದರು. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, “ಸಮುದಾಯದ ಬಾಂಧವರಿಗೆ ಕೇಳಿಕೊಳ್ಳುತ್ತೇನೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮಕೈಗೊಳ್ಳೋಣ. ಯಾರು ಗಲಾಟೆ ಮಾಡಿಕೊಳ್ಳುವುದು ಬೇಡ. ಪ್ರತಿಭಟನೆ, ಮತ್ತೂಂದು ಮಾಡುವುದು ಬೇಡ. ಯಾವುದೇ ಧರ್ಮದ ಬಗ್ಗೆ ಯಾರೇ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದರೂ ತಪ್ಪು. ಅದನ್ನು ನಾನು ಖಂಡಿಸುತ್ತೇನೆ. ಪೋಸ್ಟ್ ಹಾಕಿದವರಿಗೆ ಶಿಕ್ಷೆ ಆಗಬೇಕು. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಆಗ್ರಹಿಸುತ್ತೇನೆ,’ ಎಂದಿದ್ದಾರೆ. ಖಾತೆ ಹ್ಯಾಕ್?
ನನ್ನ ಫೇಸ್‌ಬುಕ್ ಖಾತೆ ಹ್ಯಾಕ್ ಆಗಿದೆ. ಯಾರೋ ದುಷ್ಕರ್ಮಿಗಳು ನನ್ನ ಖಾತೆ ಹ್ಯಾಕ್ ಮಾಡಿ ಕೆಟ್ಟ ಪೋಸ್ಟ್ ಹಾಕಿದ್ದಾರೆ. ದುಷ್ಕರ್ಮಿಗಳ ವಿರುದ್ಧ ನಾನು ದೂರು ದಾಖಲಿಸುತ್ತೇನೆ ಎಂದು ಶಾಸಕರ ಸಂಬಂಧಿ ನವೀನ್ ಪೋಸ್ಟ್ ಮಾಡಿದ್ದಾರೆ. ಆರೋಪಿ ಬಂಧನ?
ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಬಂಧಿತನ ಹೆಸರನ್ನು ಹೇಳಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಸಿಎಂಗೆ ಮಾಹಿತಿ ನೀಡಿದ ಗೃಹ ಸಚಿವ ಬಸಬರಾಜ್ ಬೊಮ್ಮಾಯಿ
ಬೆಂಗಳೂರು: ಕಾವಲ್ ಬೈರಸಂದ್ರದಲ್ಲಿ ನಡೆದ ಗಲಾಟೆ ಪ್ರಕರಣದ ಕುರಿತು ಗೃಹ ಸಚಿವ ಬಸಬರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಮಾಹಿತಿ ನೀಡಿದ್ದಾರೆ. ಯಾರೇ ಆಗಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಬಂದೊ ಬಸ್ತ್ ಮಾಡುವಂತೆ ಹಾಗೂ ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಈಗ ನಡೆಯುತ್ತಿರುವ ದಾಂಧಲೇ, ಬೆಂಕಿ ಹಚ್ಚುವುದು, ಲೂಟಿ ಮಾಡುವುದನ್ನು ಸಹಿಸುವುದಿಲ್ಲ. ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಹೆಚ್ಚುವರಿ ಪೊಲೀಸ್ ನಿಯೋಜನೆಗೆ ಸೂಚನೆ ನೀಡಿದ್ದೇನೆ. ಯಾರು ಎಷ್ಟೇ ದೊಡ್ಡವರಿದ್ದರೂ ಈ ಪುಂಡಾಟಿಕೆಯನ್ನು ಸಹಿಸುವುದಿಲ್ಲ. ದಾಂಧಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ. ಇತರ ಪ್ರದೇಶಗಳಲ್ಲಿಯೂ ಜನರು ಯಾವುದೇ ರೀತಿಯ ಉದ್ವೇಗಕ್ಕೆ ಒಳಗಾಗಬಾರದು.
ಬಸವರಾಜ್ ಬೊಮ್ಮಾಯಿ, ಗೃಹ ಸಚಿವ. ಪೊಲೀಸ್ ಕ್ವಾಟ್ರಸ್ ಮೇಲೆ ಬೆಂಕಿ; ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಗಾಳಿಯಲ್ಲಿ ಗುಂಡು
ಕಿಡಿಗೇಡಿಗಳು ಪೊಲೀಸ್ ಕ್ವಾಟ್ರಸ್, ವಾಹನ ಹಾಗೂ ಅಕ್ಕ ಪಕ್ಕದ ಮನೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ ಜೊತೆಗೆ ಮನೆಗಳ ಮೇಲೆ ಬೆಂಕಿ ಹಚ್ಚುವ ಕೃತ್ಯವನ್ನು ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗಲಭೆಗೆ ಓರ್ವ ಬಲಿ ?
ಬೆಂಗಳೂರು: ಕಾವಲ್ ಬೈರಸಂದ್ರದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಓರ್ವ ಮೃತ ಪಟ್ಟಿದ್ದಾನೆ ಎಂದು ವರದಿಯಾಗಿದೆ. ಗಲಭೆಯಲ್ಲಿ ಪೊಲೀಸರ ಫೈರಿಂಗ್ ಗೆ ಓರ್ವ ಮೃತ ಪಟ್ಟಿದ್ದಾನೆ. ಗಲಭೆಯನ್ನು ನಿಯಂತ್ರಿಸಲು ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.