Advertisement

Kodagu SP warning; ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಸುಮೋಟೋ ಕೇಸ್‌

11:55 PM Jan 02, 2025 | Team Udayavani |

ಮಡಿಕೇರಿ: ಯಾವುದೇ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವುದು ಕಂಡು ಬಂದಲ್ಲಿ ಪೊಲೀಸ್‌ ಇಲಾಖೆ ಸುಮೋಟೋ ಕೇಸ್‌ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಕೊಡಗು ಎಸ್‌ಪಿ ಕೆ.ರಾಮರಾಜನ್‌ ಎಚ್ಚರಿಕೆ ನೀಡಿದ್ದಾರೆ.

Advertisement

ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತುಂಜಯ ದೇವಾಲಯದಲ್ಲಿ ವಸ್ತ್ರ ಸಂಹಿತೆ ವಿಚಾರದಲ್ಲಿ ಉಂಟಾದ ಗೊಂದಲದ ಬಳಿಕ ಎರಡು ಸಮುದಾಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅವಹೇಳನ ಮಾಡುತ್ತಿರುವುದು ಕಂಡು ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ದೂರುಗಳನ್ನು ಆಧರಿಸಿ ಅನುದೀಪು ಹಾಗೂ ಅಯ್ಯಪ್ಪ ಎಂಬವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದರು. ದೇವಾಲಯದ ವಿಚಾರದ ಕುರಿತು ಎರಡೂ ಸಮುದಾಯಗಳ ಮುಖಂಡರ ಜತೆಯಲ್ಲಿ ಶಾಂತಿಸಭೆ ನಡೆಸಿ ಸಮಸ್ಯೆ ಪರಿಹರಿಸಿಕೊಳ್ಳುವಂತೆ ಸೂಚಿಸಲಾಗಿದ್ದು, ಇದಕ್ಕೆ ಇತ್ತಂಡದವರೂ ಒಪ್ಪಿಕೊಂಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next