Advertisement

ಲಸಿಕೆ ಪಡೆದ ಕೆಲವೇ ಹೊತ್ತಿನಲ್ಲಿ ಅರೋಗ್ಯ ಸಮಸ್ಯೆ: 12 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

03:15 PM Mar 23, 2022 | Team Udayavani |

ಹುಮನಾಬಾದ್ : ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ 12ರಿಂದ 14 ವರ್ಷದ ಮಕ್ಕಳು ಲಸಿಕೆ ಪಡೆದ ನಂತರ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಉಂಟ‍ದ ಘಟನೆಯೊಂದು ತಾಲೂಕಿ ಹುಡಗಿ ವಲಯದಲ್ಲಿ ಬುಧವಾರ ಸಂಭವಿಸಿದೆ.

Advertisement

ತಾಲೂಕಿನ ಜನತಾನಗರ ಗ್ರಾಮದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆ ಲಸಿಕೆ ಪಡೆದುಕೊಂಡಿದ್ದು, ನಂತರ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಮಕ್ಕಳಿಗೆ ಹೆಚ್ಚಿನ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ವಾಂತಿ, ತಲೆನೋವು, ತಲೆ ಸುತ್ತುವುದು ಮಕ್ಕಳಲ್ಲಿ ಕಾಣಿಸಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿ ಡಾ। ನಾಗನಾಥ ಹುಲಸೂರೆ ಮಾಹಿತಿ ನೀಡಿದ್ದಾರೆ.

ಶಾಲೆಯ 20 ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆ ನೀಡಲಾಗಿದ್ದು, 12 ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ನಂತರ ಮೊದಲಿಗೆ ಹುಡಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ನಂತರ ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶಾಲಾ ಮುಖ್ಯಗುರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ನಾಯಕರ ನಡವಳಿಕೆಯಿಂದಲೇ ಕಾಂಗ್ರೆಸ್ ಮುಕ್ತ ಕರ್ನಾಟಕ: ವಿಜಯೇಂದ್ರ

Advertisement

Udayavani is now on Telegram. Click here to join our channel and stay updated with the latest news.

Next