Advertisement

ಕೋಟಿ. ರೂ ಬೆಲೆ ಬಾಳುವ ಜಮೀನು ಒತ್ತುವರಿ : ಅಧಿಕಾರಿಗಳಿಂದ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ

10:09 AM Sep 07, 2022 | Team Udayavani |

ಹುಣಸೂರು : ಸರಕಾರಿ ಭೂಮಿ ಒತ್ತುವರಿ ಮಾಡಿ ನಿರ್ಮಿಸಿಕೊಂಡಿದ್ದ ೧೦ಕ್ಕೂ ಹೆಚ್ಚು ಅಂಗಡಿಗಳನ್ನು ತಹಸೀಲ್ದಾರ್ ಡಾ.ಅಶೋಕ್, ತಾ.ಪಂ.ಇಓ ಮನು ಬಿ.ಕೆ. ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

Advertisement

ಹುಣಸೂರು-ಮೈಸೂರು ಹೆದ್ದಾರಿಯ ಬೀಜಗನಹಳ್ಳಿ ಗೇಟ್‌ನಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡು ಅಂಗಡಿಗಳನ್ನು ನಿರ್ಮಿಸಿಕೊಂಡಿದ್ದಲ್ಲದೆ ಈ ಅಂಗಡಿಗಳಿಗೆ ವಿದ್ಯುತ್ ಸಂಪರ್ಕ ಪಡೆದು ಮದ್ಯರಾತ್ರಿ ವರೆಗೂ ವಹಿವಾಟು ನಡೆಸುತ್ತಿದ್ದು, ಈ ವೃತ್ತದಲ್ಲಿ ರಸ್ತೆ ಅಪಘಾತವೂ ಹೆಚ್ಚಿತ್ತು. ಈ ಬಗ್ಗೆ ಸಾಕಷ್ಟು ದೂರುಗಳಿದ್ದ ಹಿನ್ನೆಲೆಯಲ್ಲಿ ಸರ್ವೆ ನಂ.17 ರ 10.5 ಗುಂಟೆ ಸರಕಾರಿ ಭೂಮಿಯ ಅಳತೆ ನಡೆಸಿ, ಈ ಜಾಗದಲ್ಲಿ ಹಲವಾರು ವರ್ಷಗಳಿಂದ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಏಳುಕ್ಕೂ ಹೆಚ್ಚು ಅಂಗಡಿಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು.

ತೆರವು ಕಾರ್ಯಾಚರಣೆಗೆ ಬೀಜಗನಹಳ್ಳಿ ಗ್ರಾಮ ಪಂಚಾಯ್ತಿ ಪ್ರತಿನಿಧಿಗಳು, ಗ್ರಾಮದ ಯಜಮಾನರು ಸಹಕಾರ ನೀಡಿದ್ದನ್ನು ಸ್ಮರಿಸಿ, ಸುಮಾರು ಕೋಟಿರೂ ಬೆಲೆ ಬಾಳುವ ಸರಕಾರಿ ಆಸ್ತಿಯನ್ನು ರಕ್ಷಿಸಲಾಗಿದೆ ಎಂದು ತಹಸೀಲ್ದಾರ್ ಡಾ.ಅಶೋಕ್ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next