ಹುಣಸೂರು : ಜೈಪುರ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ಹುಣಸೂರು ತಾಲೂಕು ಜೈನ ಸಮಾಜದ ಮುಖಂಡ ಮೋಹನ್ ಲಾಲ್ ಜೈನ್ (70)ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಮೊಮ್ಮಕ್ಕಳೂ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ವಿವರ : ವಾರದ ಹಿಂದೆ ರಾಜಸ್ತಾನದ ಜೈಪುರದಲ್ಲಿ ಆಯೋಜಿಸಿದ್ದ ತಮ್ಮ ಮೊಮ್ಮಗಳ ಮದುವೆ ಸಮಾರಂಭಕ್ಕೆ ಕುಟುಂಬದವರೊಂದಿಗೆ ತೆರಳಿದ್ದ ಮೋಹನ್ ಲಾಲ್ ಮದುವೆ ಮುಗಿಸಿ ಮಂಗಳವಾರ ಸಂಜೆ ಜೈಪುರ ವಿಮಾನ ನಿಲ್ದಾಣಕ್ಕೆ ಖಾಸಗಿ ಟ್ಯಾಕ್ಸಿಯಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇವರಿಗೆ ನಾಲ್ವರು ಪುತ್ರಿಯರು, ಒಬ್ಬ ಮಗನಿದ್ದಾನೆ.
ಶುಕ್ರವಾರ ಮಧ್ಯಾಹ್ನ ಹುಣಸೂರು ಬೈಪಾಸ್ ರಸ್ತೆಯ ಚಿರಶಾಂತಿ ಧಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
Related Articles
ನಿಧನಕ್ಕೆ ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.