ಹುಣಸೂರು: ಕೆಲಸ ಮಾಡುವ ಸಂಸ್ಥೆಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋಗಿದ್ದಯುವಕನ ಶವ ಕೆರೆ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ.
ತಾಲೂಕಿನ ಕೊಳಗಟ್ಟ ಗ್ರಾಮದ ನಿವಾಸಿ ಅರುಣ್ ಕುಮಾರ್( 21 )ಮೃತ ದುರ್ದೈವಿ.
ಅರುಣ್ ಕುಮಾರ್ ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಅರುಣ್ ಕುಮಾರ್ ಮಧ್ಯಾಹ್ನ ಮ್ಯಾನೇಜರ್ ಕರೆಯುತ್ತಿದ್ದಾರೆಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದ ಸಂಜೆಯಾದರೂ ಮನೆಗೆ ಹಿಂದಿರುಗಿಲ್ಲ. ಹೀಗಾಗಿ ಕುಟುಂಬದವರು ಹಾಗೂ ಸ್ನೇಹಿತರು ಹುಡುಕಾಡಿದಾಗ ಬಿಳಿಕೆರೆ ಕೆರೆ ಬಳಿ ಮೃತದೇಹ ಪತ್ತೆಯಾಗಿದ್ದು.
ಸ್ಥಳಕ್ಕೆ ಬಿಳಿಕೆರೆ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಹಾಲಿನಿಂದ ತ್ವಚೆಯ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬಹುದು… ಇಲ್ಲಿದೆ ಕೆಲವು ಟಿಪ್ಸ್