Advertisement

ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಅನಿತ್ತೀರ್ಣ: ಮನನೊಂದ ವಿದ್ಯಾರ್ಥಿ ನೇಣಿಗೆ ಶರಣು

09:20 PM May 19, 2022 | Team Udayavani |

ಹುಣಸೂರು : ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತಾಲೂಕಿನ ಬೂತಾಳೆ ಪೆಂಜಹಳ್ಳಿಯಲ್ಲಿ ನಡೆದಿದೆ.

Advertisement

ಹುಣಸೂರು ತಾಲೂಕಿನ ನಾಗಾಪುರ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿ ಬೂತಾಳೆ ಪೆಂಜಹಳ್ಳಿಯ ವಿಜಯ್ ರ ಪುತ್ರ ಸಂಜಯ್ ಆತ್ಮಹತ್ಯೆಗೆ ಶರಣಾದಾತ.

ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ,ಪರೀಕ್ಷೆಯಲ್ಲಿ ಇಂಗ್ಲಿಷ್ ಸಮಾಜ ವಿಷಯದಲ್ಲಿ ಅನುತ್ತೀರ್ಣ ಗೊಂಡಿರುವ ಹಿನ್ನೆಲೆಯಲ್ಲಿ ಮನನೊಂದು ತಮ್ಮ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ.

ಸಂಜಯ್ ತಂದೆ-ತಾಯಿ ಇಂದು ಬೆಳಿಗ್ಗೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಮನೆಯಲ್ಲಿ ಬಂದು ನೋಡಿದಾಗ ಸಂಜಯ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ : ಮಳೆಯಬ್ಬರ ಎದುರಿಸಲು ಸಕಲ ಸಿದ್ಧತೆ : ಮುಂದಿನ ವಾರ 4 ಎನ್‌ಡಿಆರ್‌ಎಫ್ ತಂಡ ರಾಜ್ಯಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next