Advertisement

ಪಾಕ್ ಪರ ಘೋಷಣೆ ವಿಚಾರ:ಬೆಳ್ತಂಗಡಿ ಪೊಲೀಸ್ ಠಾಣೆ ಎದುರು ಜಮಾಯಿಸಿದ ನೂರಾರುSDPI ಕಾರ್ಯಕರ್ತರು

11:15 AM Jan 06, 2021 | Team Udayavani |

ಬೆಳ್ತಂಗಡಿ: ಉಜಿರೆಯಲ್ಲಿ ಪಾಕ್ ಪರ ಘೋಷಣೆ ವಿಚಾರವಾಗಿ ಎಸ್.ಡಿ.ಪಿ.ಐ ಕಾರ್ಯಕರ್ತರು ಬುಧವಾರ (ಜ.6) ಬೆಳ್ತಂಗಡಿ ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿದ್ದಾರೆ. ಠಾಣೆಗೆ ಮುತ್ತಿಗೆ ಹಾಕುವ ವಿಚಾರ ಮೊದಲೆ ಅರಿತಿದ್ದ ಪೊಲೀಸ್ ಇಲಾಖೆ ಸಕಲ ಬಂದೋಬಸ್ತ್ ಏರ್ಪಡಿಸಿತ್ತು.

Advertisement

ಈ ವೇಳೆ ಮಾತನಾಡಿದ ಎಸ್.ಡಿ.ಪಿ.ಐ. ತಾಲೂಕು ಅಧ್ಯಕ್ಷ ಹೈದರ್ ನೀರ್ಸಾಲ್, ಪಾಕ್ ಪರ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸದೆ ಅಮಾಯಕರನ್ನು ಬಂಧಿಸಲಾಗಿದೆ. ರಾಜಕೀಯಕ್ಕೆ ಒತ್ತಡ ಬಳಸಿ ಎಸ್.ಡಿ.ಪಿ.ಐ. ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ. ನಮಗೆ ಉತ್ತರ ಬೇಕು. ನಾವು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದೇವೆ. ಮೇಲಾಧಿಕಾರಿಗಳು ಬರುವವವರೆಗೂ ನಾವು ಕದಲುವುದಿಲ್ಲ ಎಂದರು.  ಈ ವೇಳೆ ಶಾಸಕ ಹರೀಶ್ ಪೂಂಜ, ಸಂಸದ ನಳಿನ್ ಕುಮಾರ್ ಕಟಿಲ್ ವಿರುದ್ಧ ಘೋಷಣೆ ಕೂಗಿದರು.

ಇದನ್ನೂ ಓದಿ: ವಾಟ್ಸಾಪ್ ನಿಯಮಗಳಲ್ಲಿ ಬದಲಾವಣೆ: ಷರತ್ತು ಒಪ್ಪದಿದ್ದರೇ ನಿಮ್ಮ ಅಕೌಂಟ್ ಡಿಲೀಟ್ !

Advertisement

ಎಸ್.ಡಿ.ಪಿ.ಐ. ರಾಷ್ಟ್ರೀಯ ಕಾರ್ಯದರ್ಶಿ ಮಾತನಾಡಿ, ಸಂವಿಧಾನಕ್ಕೆ ನಾವು ಗೌರವ ನೀಡುವವರು. ಸಂವಿಧಾನ ಬದ್ಧವಾಗಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಎಸ್.ಡಿ.ಪಿ.ಐ. ಪಕ್ಷಕ್ಕೆ  ಘೋಷಣೆ ಕೂಗಿದ್ದಾರೆ. ಆದರೆ ಅವರನ್ನು ವಿಡಿಯೋದಲ್ಲಿ ತಿರುಚಲಾಗಿದೆ. ಆದರೂ ಅಮಾಯಕರನ್ನು ಬಂಧಿಸಲಾಗಿದೆ ಎಂದು ಆರೋಪೀಸಿದರು.

ನೂರಕ್ಕೂ ಅಧಿಕ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದರು. ಬೆಳ್ತಂಗಡಿ ಪೊಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ನಂದಕುಮಾರ್ ಎಂ.ಎಂ. ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಇದನ್ನೂ ಓದಿ: ಸರ್ಕಾರದ ವಿರುದ್ಧ ಸಂಘರ್ಷ: ಜಾಕ್‌ ಮಾ ಎಲ್ಲಿ? : 2 ತಿಂಗಳಿಂದ ಕಣ್ಮರೆ

Advertisement

Udayavani is now on Telegram. Click here to join our channel and stay updated with the latest news.

Next