Advertisement

“ಹಸಿವು ಮುಕ್ತ ರಾಜ್ಯ’ರಾಜ್ಯ ಸರಕಾರದ ಸಾಧನೆ’

06:05 AM May 11, 2018 | Team Udayavani |

ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯನ್ನು ಪರಿಣಾಮ ಕಾರಿಯಾಗಿ ಜಾರಿಗೆ ತಂದು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿರುವುದು ಕೆಲವರಿಗೆ ನುಂಗಲಾರದ ತುತ್ತಾಗಿದೆ. 
ಕಾರ್ಯಕರ್ತರು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮತವನ್ನಾಗಿ ಪರಿವರ್ತಿಸುವ ಪ್ರಯತ್ನ ಮಾಡಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಬೇಕೆಂದು ಕಾಂಗ್ರೆಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹೇಳಿದರು. 
 
ಪರ್ಕಳ, ಮಣಿಪಾಲ, ಸರಳೆಬೆಟ್ಟು, ಕಡೆಕಾರ್‌ಗಳಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿ, ಜನರ ಬದುಕನ್ನು ಹಸನುಗೊಳಿಸುವ ಯೋಜನೆಗಳನ್ನು ಮುಕ್ತ ಮನಸ್ಸಿನಿಂದ ಕಾರ್ಯಗತಗೊಳಿಸುವುದಕ್ಕೆ ಕಾಂಗ್ರೆಸ್‌ ಬದ್ಧವಾಗಿದೆ. ರಾಜ್ಯ ಸರಕಾರದ ಜನೋಪ ಯೋಗಿ ಯೋಜನೆಗಳನ್ನು ಉಡುಪಿ ಕ್ಷೇತ್ರದಲ್ಲಿ ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗಿದೆ ಎಂದರು. 

Advertisement

ಎಐಸಿಸಿ ಸದಸ್ಯ ಅಮೃತ್‌ ಶೆಣೈ ಮಾತನಾಡಿ, ಕಳಂಕಿತ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಮೂಲಕ ಭ್ರಷ್ಟಾಚಾರ ಪೋಷಣೆಗೆ ಸ್ವತಃ ಪ್ರಧಾನಿ ಅವರು ಮುಂದಾಗಿರುವುದು, ಕೇಂದ್ರವು ಭ್ರಷ್ಟಾಚಾರವನ್ನು ಪೋಷಿಸುತ್ತಿದೆ ಎನ್ನು ವುದಕ್ಕೆ ಸ್ಪಷ್ಟ ಉದಾಹರಣೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಮತದಾರರಲ್ಲಿ  ವಿನಂತಿಸಿದರು.  
 
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕರೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಪೂರ್‌,  ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಮುಖಂಡರಾದ ದಿವಾಕರ ಕುಂದರ್‌, ಪ್ರಖ್ಯಾತ್‌ ಶೆಟ್ಟಿ, ಕೀರ್ತಿ ಶೆಟ್ಟಿ, ಅನಂತ್‌ ನಾಯ್ಕ, ಜನಾರ್ದನ ಭಂಡಾರ್ಕಾರ್‌, ಚಂದ್ರಿಕಾ ಶೆಟ್ಟಿ, ಸುಕೇಶ್‌ ಕುಂದರ್‌, ಗಣೇಶ್‌ ನೇರ್ಗಿ, ಶೇಖರ್‌ ಜಿ. ಕೋಟ್ಯಾನ್‌ ಉಪಸ್ಥಿತರಿದ್ದರು.  

Advertisement

Udayavani is now on Telegram. Click here to join our channel and stay updated with the latest news.

Next