Advertisement

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

12:57 AM Oct 07, 2024 | Team Udayavani |

ಬೆಳ್ತಂಗಡಿ: ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸುವಂತೆ ಹಾಗೂ ಪ್ರತ್ಯೇಕ ಸ್ವಾಯತ್ತ ಮಂಡಳಿ ರಚಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷದ್‌ ಪುತ್ತೂರು ಜಿಲ್ಲೆ ಇದರ ವತಿಯಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ರವಿವಾರ ಬೆಳಗ್ಗಿನಿಂದ ಸಂಜೆವರೆಗೆ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ನಡೆಯಿತು.

Advertisement

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಚುನಾಯಿತ ಸರಕಾರ ವ್ಯಾಪಾರ ಕೇಂದ್ರಗಳಂತೆ ನಡೆಸುತ್ತಿರುವುದು ಹಿಂದೂಗಳ ಮನಸ್ಸಿಗೆ ಘಾಸಿಯನ್ನುಂಟು ಮಾಡಿದೆ. ಹಿಂದೂ ಧಾರ್ಮಿಕ ಧತ್ತಿ ಇಲಾಖೆ ಆಡಳಿತಕ್ಕೆ ಒಳಪಟ್ಟ (ಎ ಗ್ರೇಡ್‌ ಬಿ ಗ್ರೇಡ್‌ ಹಾಗೂ ಸಿ ಗ್ರೇಡ್‌) ದೇವಾಲಯಗಳನ್ನು ಸರಕಾರದ ಹಿಡಿತದಿಂದ ವಿಮುಕ್ತಿಗೊಳಿಸಲು ಹಾಗೂ ಹಿಂದೂ ಸ್ವಾಯತ್ತ ಮಂಡಳಿಯನ್ನು ರಚಿಸಿ ಹಿಂದೂಗಳಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ಹಿಂದಿರುಗಿಸಬೇಕು ಎಂದು ಉಪವಾಸ ಸತ್ಯಾಗ್ರಹದಲ್ಲಿ ಒತ್ತಾಯಿಸಲಾಯಿತು.

ಕೊಕ್ಕಡದ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ ಅಧ್ಯಕ್ಷ ಕೃಷ್ಣ ಭಟ್‌ ಕೊಕ್ಕಡ ಹಾಗೂ ಕೊಕ್ಕಡ ವೈದ್ಯ ಡಾ| ಮೋಹನ್‌ ದಾಸ್‌ ಗೌಡ ಸತ್ಯಾಗ್ರಹಕ್ಕೆ ಚಾಲನೆ ನೀಡಿದರು. ವಿಶ್ವಹಿಂದೂ ಪರಿಷದ್‌ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪುವೆಲ್‌ ಮಾತನಾಡಿದರು.

ಉಪವಾಸ ಸತ್ಯಾಗ್ರಹದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್‌, ವಿಭಾಗ ಸಾಮರಸ್ಯ ಪ್ರಮುಖ್‌ ಭಾಸ್ಕರ ಧರ್ಮಸ್ಥಳ, ಜಿಲ್ಲಾ ಅಧ್ಯಕ್ಷ ಕೃಷ್ಣ ಪ್ರಸನ್ನ, ಉಪಾಧ್ಯಕ್ಷ ಸತೀಶ್‌ ಬಿ.ಎಸ್‌. ಹಾಗೂ ವಿವಿಧ ಸಂಘಟನೆಗಳ ಹಾಗೂ ದೇವಸ್ಥಾನಗಳ ಮತ್ತು ಧಾರ್ಮಿಕ ಕೇಂದ್ರಗಳ ಪ್ರಮುಖರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next