Advertisement
ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಚಿಟಕ್ಯಾತನಹಳ್ಳಿ ಗ್ರಾಮದ ಕೃಷ್ಣೇಗೌಡರ ಏಕೈಕ ಪುತ್ರ ಮಹೇಶ್(32) ಮೃತರು. ತಂದೆ, ಸಹೋದರಿ, ಪತ್ನಿ ವಿನೋದ, ಐದು ವರ್ಷದ ಮಗಳಿದ್ದಾಳೆ. ಇವರು ಹರವೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರೇಗೌಡರ ಅಳಿಯ.ಮಹೇಶ್ ಪಶ್ಚಿಮ ಬಂಗಾಳದ ಕೋಲ್ಕತದಲ್ಲಿ ಭೂಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅ.3 ಕ್ಕೆ ಸ್ವಗ್ರಾಮಕ್ಕೆ ರಜೆ ಮೇಲೆ ಬಂದಿದ್ದ ಇವರು ಕುಟುಂಬ ಹಾಗೂ ಸ್ನೇಹಿತರೊಂದಿಗೆ ಬೆರೆತು ರಜೆ ಕಳೆಯುತ್ತಿದ್ದರು. ನ.1 ಕ್ಕೆ ಕರ್ತವ್ಯಕ್ಕೆ ಮರಳಬೇಕಿತ್ತು.
ಶಾಸಕ ಎಚ್.ಪಿ.ಮಂಜುನಾಥ್, ತಹಶೀಲ್ದಾರ್ ಕರ್ನಲ್ ಡಾ.ಅಶೋಕ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ, ಜಿ.ಪಂ.ಮಾಜಿ ಸದಸ್ಯ ಸಿ.ಟಿ.ರಾಜಣ್ಣ ಸೇರಿದಂತೆ ಅನೇಕ ಮುಖಂಡರು ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದರು.
Related Articles
ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಿ.ವಿ.ರವಿ ನೇತೃತ್ವದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸರಿಂದ ಮೂರು ಸುತ್ತು ಗುಂಡು ಹಾರಿಸಿ ಗೌರವ ವಂದನೆ ಸಲ್ಲಿಸಿದರು.
Advertisement