Advertisement

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

08:21 PM May 16, 2024 | Team Udayavani |

ಹುಣಸೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಹಿರಿಕ್ಯಾತನಹಳ್ಳಿ ರಸ್ತೆಯಲ್ಲಿ ನಡೆದಿದೆ.

Advertisement

ಹುಣಸೂರು ತಾಲೂಕು ಮರೂರುಕಾವಲ್ ಗ್ರಾಮದ ನಿವಾಸಿ ಸಾಗರ್(35)ಮೃತ ದುರ್ದೈವಿ, ಇವರಿಗೆ ಪತ್ನಿ, ಇಬ್ಬರು ಗಂಡುಮಕ್ಕಳಿದ್ದಾರೆ.

ಸಾಗರ್ ತನ್ನ ಸ್ನೇಹಿತ ಹರೀಶ್‌ರೊಂದಿಗೆ ಬೈಕಿನಲ್ಲಿ ಕೆ.ಆರ್.ನಗರದ ಹೆಬ್ಬಾಳು ಗ್ರಾಮದಲ್ಲಿ ನಡೆದಿದ್ದ ಕಾರ್ಯಕ್ರಮಕ್ಕೆ ತೆರಳಿ ಸ್ವಗ್ರಾಮ ಮರೂರು ಕಾವಲ್‌ಗೆ ಹಿಂದಿರುಗುತ್ತಿದ್ದ ವೇಳೆ ಶಿರೇನಹಳ್ಳಿ ಗ್ರಾಮದ ಬಳಿ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ತೀವ್ರಗಾಯಗೊಂಡ ಸಾಗರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿಯ ಸವಾರ ಅರಸು ಕಲ್ಲಹಳ್ಳಿ ಗ್ರಾಮದ ಹರೀಶ್ ತೀವ್ರವಾಗಿ ಗಾಯಗೊಂಡು ಹುಣಸೂರಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಬೈಕ್ ಸವಾರ ಕೆಸ್ತೂರು ಕೊಪ್ಪಲು ಗ್ರಾಮದ ನಿವಾಸಿ ಕೆಂಡಗಣ್ಣ ತೀವ್ರ ಗಾಯಗೊಂಡಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಚಿಕ್ಕರಂಗಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next