ಹುಣಸೂರು: ಚಾಲಕನ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಹುಣಸೂರು ನಗರದ ಕಬ್ಬಿನ ಹಾಲಿನ ವ್ಯಾಪಾರಿ ಶಬ್ಬೀರ್ ನಗರದ ರಫೀಕ್(35) ಮೃತರು, ಪತ್ನಿ, ಇಬ್ಬರು ಮಕ್ಕಳಿದ್ದಾರೆ.
ದೊಡ್ಡ ಹೆಜ್ಜೂರಿನಲ್ಲಿ ನಡೆಯುವ ಜಾತ್ರೆಯಲ್ಲಿ ಕಬ್ಬಿನ ಹಾಲು ವ್ಯಾಪಾರ ನಡೆಸಲು ತನ್ನ ಗೂಡ್ಸ್ ಆಟೋದಲ್ಲಿ ಸಾಮಗ್ರಿಗಳನ್ನು ಕೊಂಡೊಯ್ದು ಅಲ್ಲೆ ಇಟ್ಟು ವಾಪಸ್ ಬರುವ ವೇಳೆ ನಾಗರಹೊಳೆ ರಸ್ತೆಯ ನಾಗಾಪುರ ತಿರುವಿನಲ್ಲಿ ಬಂದ ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಏಕಾಏಕಿ ಬ್ರೇಕ್ ಹಾಕಿದ್ದರಿಂದ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ತೀವ್ರಗಾಯಗೊಂಡಿದ್ದ ರಫೀಕ್‌ನ್ನು ದಾರಿ ಹೋಕರು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.