Advertisement

Hunsur: ಬಹುಅಂಗಾಗ ವೈಫಲ್ಯದಿಂದ ಆನೆ ಸಾವು

06:54 PM Aug 12, 2023 | Team Udayavani |

ಹುಣಸೂರು: ಆನೆ ದಿನದಂದೇ ನಾಗರಹೊಳೆ ಉದ್ಯಾನದ ಸಾಕಾನೆ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದ ಸುಬ್ರಮಣ್ಯ(50)ಮೃತಪಟ್ಟಿರುವ ಘಟನೆ ನಡೆದಿದೆ.
ಕಳೆದ ಮೂರು ತಿಂಗಳ ಹಿಂದೆ ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ವಲಯ ಅರಣ್ಯ ಪ್ರದೇಶದಲ್ಲಿ ಒಂದೇ ದಿನ ಇಬ್ಬರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಸೆರೆ ಹಿಡಿದು ನಾಗರಹೊಳೆ ಉದ್ಯಾನವನದ ಮತ್ತಿಗೋಡು ವಲಯದ ಕಂಠಾಪುರ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಿ ಕ್ರಾಲ್‌ನಲ್ಲಿಡಲಾಗಿತ್ತು. ಈ ಆನೆಗೆ ಸುಬ್ರಹ್ಮಣ್ಯವಲಯದಲ್ಲಿ ಸೆರೆ ಸಿಕ್ಕಿದ್ದರಿಂದಾಗಿ ಸುಬ್ರಹ್ಮಣ್ಯನೆಂದು ನಾಮಕರಣ ಮಾಡಲಾಗಿತ್ತು.

Advertisement

ಹೆಚ್ಚಿನ ತರಬೇತಿಗಾಗಿ ಜು.20 ರಂದು ಕ್ರಾಲ್‌ನಿಂದ ಬಂಧಮುಕ್ತಗೊಳಿಸಿ ಮಾವುತ ಶಿವು, ಕವಾಡಿ ಚಂದ್ರರವರ ಉಸ್ತುವಾರಿಯಲ್ಲಿ ತರಬೇತಿ ನೀಡಲಾಗುತ್ತಿತ್ತು.
ಆನೆ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದ ಸುಬ್ರಹ್ಮಣ್ಯ ಆ.11 ರ ಶುಕ್ರವಾರದಂದು ಮಲಗಿದಲ್ಲೇ ಅಸ್ಪಸ್ಥಗೊಂಡಿದ್ದ ಆನೆಗೆ ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಚಿಕಿತ್ಸೆ ನೀಡಿದರಾದರೂ ಮೇಲೇಳಿಸುವ ಪ್ರಯತ್ನ ಸಫಲವಾಗದೆ ಕ್ರೇನ್ ತರಿಸಿ ಎದ್ದು ನಿಲ್ಲಿಸುವ ಯತ್ನವೂ ವಿಫಲವಾಗಿ ಅಂದೇ ಸಂಜೆ ವೇಳೆಗೆ ಮೃತಪಟ್ಟಿದೆ ಎಂದು ಹುಲಿಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ಆನೆ ಶವ ಪರೀಕ್ಷೆ ನಡೆದಿದ ವೈದ್ಯರ ತಂಡ:
ಶನಿವಾರದಂದು ಹುಣಸೂರು ವನ್ಯಜೀವಿ ಉಪ ವಿಭಾಗದ ಪಶುವೈದ್ಯಾಧಿಕಾರಿ ಡಾ.ಚೆಟ್ಟಿಯಪ್ಪ, ದುಬಾರೆ ಶಿಬಿರದ ಪಶುವೈದ್ಯ ಡಾ.ಮದನ್ ಗೋಪಾಲ್, ಮೈಸೂರು ಲೀಲಾಪೆಟ್ ಆಸ್ಪತ್ರೆಯ ಡಾ.ಎಚ್.ರಮೇಶ್‌ರವರು ಡಿಸಿಎಫ್ ಹರ್ಷಕುಮಾರ್‌ಚಿಕ್ಕನರಗುಂದ, ಎಸಿಎಫ್ ದಯಾನಂದ, ಆರ್.ಎಫ್.ಓ. ದಿಲೀಪ್‌ಕುಮಾರ್ ಸಮ್ಮುಖದಲ್ಲಿ ಸುಬ್ರಹ್ಮಣ್ಯ ಆನೆಯ ಶವ ಪರೀಕ್ಷೆ ನಡೆಸಿದರು.

ಬಹುಅಂಗಾಂಗ ವೈಫಲ್ಯದಿಂದ ಸಾವು:
ಆನೆಯು ಬಹು ಅಂಗಾಂಗ ವೈಫಲ್ಯ ಕಾಯಿಲೆ(ಆರ್ಥಿಟಿಸ್)ಯಿಂದ ಸೆಪ್ಟಿಸೀಮಿಯಾ (ಇನ್‌ಫೆಕ್ಷನ್)ನಿಂದ ಬಳಲಿ ಮೃತಪಟ್ಟಿರುವುದಾಗಿ ಪಶುವೈದ್ಯರ ತಂಡ ಮಾಹಿತಿ ನೀಡಿದ್ದು, ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಆನೆಯ ಶವವನ್ನು ಹೂತಿರುವುದಾಗಿ ಡಿಸಿಎಫ್ ಉದಯವಾಣಿಗೆ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next