ಹುಣಸೂರು: ಹುಣಸೂರು ನಗರದಲ್ಲಿ ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್‌ಗಳನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಬುಧವಾರ ರಾತ್ರಿ ಮೈಸೂರು-ಹುಣಸೂರು ಹೆದ್ದಾರಿಯ ಬೈಪಾಸ್‌ನ ಅನ್ನಪೂರ್ಣ ಹೋಟೆಲ್ ಬಳಿ ಮರಳು ತುಂಬಿದ್ದ ಎರಡು ಟಿಪ್ಪರ್‌ಗಳನ್ನು ವಶಪಡಿಸಿಕೊಂಡಿದ್ದು, ಚಾಲಕರಿಬ್ಬರು ಪರಾರಿಯಾಗಿದ್ದಾರೆ.
ಘಟನೆ ವಿವರ: ತಲಕಾಡಿನಿಂದ ಹುಣಸೂರಿಗೆ ಅಕ್ರಮವಾಗಿ ಟಿಪ್ಪರ್‌ಗಳಲ್ಲಿ ಮರಳು ಸಾಗಿಸುತ್ತಿರುವ ಬಗ್ಗೆ ಬುಧವಾರ ರಾತ್ರಿ ಬಂದ ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಮಹೇಶ್ ನೇತೃತ್ವದಲ್ಲಿ ನಗರ ಠಾಣೆ ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿ ಮರಳು ಸಹಿತ ಟಿಪ್ಪರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ಸುಳಿವರಿತ ಚಾಲಕರು ಟಿಪ್ಪರ್ ನಿಲ್ಲಿಸಿ ಪರಾರಿಯಾಗಿದ್ದಾರೆ. ಮರಳು ಸಹಿತ ಟಿಪ್ಪರ್‌ಗಳನ್ನು ವಶಕ್ಕೆ ಪಡೆದಿದ್ದು, ಈ ಸಂಬಂಧ ಟಿಪ್ಪರ್ ಮಾಲಿಕರು ಹಾಗೂ ಚಾಲಕರ ವಿರುದ್ದ ಪ್ರಕರಣ ದಾಖಲಾಗಿದೆ ಎಂದು ಡಿವೈಎಸ್‌ಪಿ ಮಹೇಶ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ದೇವೇಂದ್ರ, ಎ.ಎಸ್.ಐ.ರವಿ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.