Advertisement
ಕಳೆದ ಮೂರು ದಿನಗಳಿಂದ ಲಕ್ಷ್ಮಣತೀರ್ಥ ನದಿ ಹುಟ್ಟುವ ಇರ್ಪು ಸೇರಿದಂತೆ ಸುತ್ತಮುತ್ತ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎರಡೇ ದಿನದಲ್ಲಿ ಲಕ್ಷ್ಮಣತೀರ್ಥ ನದಿಯ ಹನಗೋಡು ಅಣೆಕಟ್ಟೆ ತುಂಬಿ ಸುಮಾರು ಎರಡೂವರೆ ಅಡಿಯಷ್ಟು ನೀರು ಹರಿಯುತ್ತಿದೆ. ಶೀಘ್ರದಲ್ಲೇ ಮುಖ್ಯ ಕಾಲುವೆಗೆ ನೀರು ಹರಿಸಿ ಕೆರೆಗಳಿಗೆ ನೀರು ತುಂಬಿಸಲಾಗುವುದೆಂದು ಹಾರಂಗಿ ಹನಗೋಡು ಉಪ ವಿಭಾಗದ ಎಇಇ ಅಶೋಕ್ ತಿಳಿಸಿದ್ದಾರೆ.
Related Articles
Advertisement
ರೈತರಲ್ಲಿ ಸಂತಸ:
ಮಳೆ ಇಲ್ಲದೆ ಸೊರಗುತ್ತಿದ್ದ ತಂಬಾಕು ಬೆಳೆಗೆ ಈ ಮಳೆಯು ಸಂಜೀವಿನಿಯಂತಾಗಿದೆ. ಇದರಿಂದ ತಂಬಾಕು ಹಾಗೂ ಶುಂಠಿ ಬೆಳೆಗಾರರು ಹರ್ಷಗೊಂಡಿದ್ದಾರೆ. ಇದೇ ರೀತಿ ಮಳೆ ಮುಂದುವರೆದಲ್ಲಿ ತಂಬಾಕು ಹಾಗೂ ಶುಂಠಿ ಬೆಳೆ ಕೊಳೆಯುವ ಭೀತಿಯೂ ಎದುರಾಗಿದೆ ಎನ್ನುತ್ತಾರೆ ರೈತರು.