Advertisement

Hunsur: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:ಗಾಯಾಳು ಪಾದಚಾರಿ ಸಾವು

07:02 PM Oct 20, 2024 | Team Udayavani |

ಹುಣಸೂರು: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ತೀವ್ರಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

Advertisement

ನಗರದ ಸೋಮು ಡ್ರೈವಿಂಗ್‌ ಸ್ಕೂಲ್‌ನ ಪ್ರಿನ್ಸಿಪಾಲ್‌ ಸೋಮಶೇಖರ್‌ ಅವರ ಸಹೋದರ ಹೌಸಿಂಗ್‌ ಬೋರ್ಡ್‌-3ನೇ ಹಂತದ ನಿವಾಸಿ ಮಹೇಶ್‌(38)ಸಾವನ್ನಪ್ಪಿದವರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ವಿಜಯದಶಮಿಯಂದು ನಗರದ ಆರ್‌ಟಿಒ ಕಚೇರಿ ಎದುರಿನ ಹೆದ್ದಾರಿ ದಾಟುತ್ತಿದ್ದ ವೇಳೆ ಮಡಿಕೇರಿ ಕಡೆಯಿಂದ ಹುಣಸೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ತೀವ್ರಗಾಯಗೊಂಡಿದ್ದರು.

ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ ಸಾವನ್ನಪ್ಪಿದ್ದಾರೆ.

ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ತೆಂಕಲಕೊಪ್ಪಲಿನಲ್ಲಿ ಭಾನುವಾರ ನಡೆಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next