Advertisement
ಹೊಸವರ್ಷದ ಅಂಗವಾಗಿ ಕೇಕ್ ಕಟ್ ಮಾಡಿ ಮಕ್ಕಳಿಗೆ ವಿತರಿಸಿದ್ದಾರೆ. ಕೇಕ್ ತಿಂದಿದ್ದರಿಂದಾಗಿ ಶುಕ್ರವಾರ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಮಕ್ಕಳನ್ನು ಬೋಳನಹಳ್ಳಿ ಗ್ರಾಮದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭೇದಿ ಕಾಣಿಸಿಕೊಂಡಿದ್ದ 36 ಮಕ್ಕಳ ಪೈಕಿ 6 ಮಕ್ಕಳು ತಕ್ಷಣವೇ ಚೇತರಿಸಿಕೊಂಡಿದ್ದರಿಂದ ಮನೆಗೆ ಕಳುಹಿಸಲಾಗಿದೆ. ಉಳಿದ ಮಕ್ಕಳನ್ನು ದಾಖಲಿಸಿಕೊಂಡು ಸಂಜೆವರೆಗೆ ಚಿಕಿತ್ಸೆ ನೀಡಿದ ನಂತರ ಚೇತರಿಸಿಕೊಂಡವರನ್ನು ಬಿಡುಗಡೆ ಮಾಡಲಾಗಿದೆ. ಕೇಕ್ನ ಸ್ಯಾಂಪಲ್ ಪಡೆದಿದ್ದು, ಲ್ಯಾಬ್ಗ ಕಳುಹಿಸಲಾಗುವುದು, ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.
Related Articles
ಮಕ್ಕಳ ಅಸ್ವಸ್ಥ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶನಿವಾರ ಮುಖ್ಯ ಶಿಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗುವುದೆಂದು ಬಿಇಒ ಮಹದೇವ್ ಪತ್ರಿಕೆಗೆ ತಿಳಿಸಿದ್ದಾರೆ.
Advertisement