Advertisement

ಮಗಳ ಮದುವೆ ದಿನದಂದೇ ತಂದೆ ಹೃದಯಾಘಾತದಿಂದ ಸಾವು : ಸಂಭ್ರಮ ನಡೆಯಬೇಕಿದ್ದ ಮನೆಯಲ್ಲಿ ನೀರವ ಮೌನ

07:47 PM Feb 21, 2022 | Team Udayavani |

ಹುಣಸೂರು : ಮಗಳ ಮದುವೆಯ ದಿನವೆ ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ.

Advertisement

ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹಿರೀಕ್ಯಾತನಹಳ್ಳಿ ಗ್ರಾಮದ ರೇಷ್ಮೆ ಇಲಾಖೆಯ ನಿವೃತ್ತ ನೌಕರ ಸೋಮನಾಯಕ(62) ಸಾವನ್ನಪ್ಪಿದವರು. ಇವರಿಗೆ ಪತ್ನಿ ಹಾಗೂ ಓರ್ವ ಪುತ್ರ, ಪುತ್ರಿ ಇದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಲಘು ಹೃದಯಾಘಾತವಾಗಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಿಧನರಾಗಿದ್ದಾರೆ. ಇವರ ಅಂತ್ಯಕ್ರಿಯೆ ಸೋಮವಾರ ಸ್ವಗ್ರಾಮದಲ್ಲಿ ನಡೆಯಿತು.

ತಮ್ಮ ಪುತ್ರಿಯ ವಿವಾಹ ಮೈಸೂರಿನ ಕಲ್ಯಾಣ ಮಂಟಪವೊಂದರಲ್ಲಿ ಭಾನುವಾರದಂದು ಆಯೋಜಿಸಲಾಗಿತ್ತು. ಇತ್ತ ಮದುವೆ ಮಂಟಪದಲ್ಲಿ ಮದುವೆ ಕಾರ್ಯ ನಡೆಯುತ್ತಿದ್ದರೆ, ಅತ್ತ ಮಗಳ ಮದುವೆ ದಿನವೇ ಸೋಮನಾಯ್ಕ ಮೃತಪಟ್ಟರು. ಮದುವೆ ಮನೆ ಮಸಣವಾದಂತಾಗಿತ್ತು. ಕುಟುಂಬದವರ ಆಕ್ರಂದನ ಹೇಳತೀರದಾಗಿತ್ತು.

ಇದನ್ನೂ ಓದಿ : ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಚಾಕು ಇರಿದು ಕಳ್ಳ ಪರಾರಿ

Advertisement
Advertisement

Udayavani is now on Telegram. Click here to join our channel and stay updated with the latest news.

Next