Advertisement

ದೈತ್ಯ ಅಳಿಲು, ಹಾರುವ ಅಳಿಲುಗಳ ಬೇಟೆ: ಆರೋಪಿಗಳು ಪರಾರಿ

12:10 AM Jul 12, 2023 | Team Udayavani |

ಅರಂತೋಡು/ ಮಡಿಕೇರಿ: ಸಂಪಾಜೆ ವಲಯದ ಡಬ್ಬಡ್ಕ ಪಟ್ಟಿ ಘಾಟಿ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ವಿನಾಶದಂಚಿನಲ್ಲಿರುವ ಮಲಬಾರ್‌ ದೈತ್ಯ ಅಳಿಲು ಹಾಗೂ ಹಾರುವ ಅಳಿಲುಗಳನ್ನು ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸಿದ ಪ್ರಕರಣವನ್ನು ಸಂಪಾಜೆ ವಲಯ ಅರಣ್ಯ ಇಲಾಖೆ ಬಯಲಿಗೆಳೆದಿದೆ.

Advertisement

ವನ್ಯ ಜೀವಿಗಳನ್ನು ಕೆಲವರು ಬೇಟೆಯಾಡಿರುವ ಬಗ್ಗೆ ಸಂಪಾಜೆ ವಲಯ ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭಿಸಿತ್ತು. ಅದರಂತೆ ಆರೋಪಿಗಳಾದ ದಬ್ಬಡ್ಕ ಗ್ರಾಮದ ಮದನ್‌ ಕುಮಾರ್‌ (38), ಗಣಪತಿ ಬಿನ್‌ ಮಾಚಯ್ಯ (50) ಹಾಗೂ ಪ್ರಸನ್ನ ಕುಮಾರ್‌ (35) ಅವರ ಮನೆಗಳ ಮೇಲೆ ಅರಣ್ಯ ಇಲಾಖೆ ಸಿಬಂದಿ ದಾಳಿ ನಡೆಸಿದರು. ಈ ಸಂದರ್ಭ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ಮನೆಯಲ್ಲಿದ್ದ 2 ವನ್ಯಜೀವಿಗಳ ಮಾಂಸವ‌ನ್ನು ಪಾತ್ರೆ ಸಹಿತ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಮತು ವಲಯ ಅರಣ್ಯಾಧಿಕಾರಿ ಮಧುಸೂದನ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ನಿಸಾರ್‌ ಮಹಮ್ಮದ್‌, ಗಸ್ತು ಅರಣ್ಯ ಪಾಲಕರಾದ ಚಂದ್ರಪ್ಪ, ಕಾರ್ತಿಕ್‌, ಮನೋಜ್‌ ಕುಮಾರ್‌, ದುರ್ಗಾಪ್ರಸಾದ್‌, ಗಗನ್‌, ಶರತ್‌, ಶಂಕರ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next