ಹನೂರು (ಚಾಮರಾಜನಗರ): ಪತ್ನಿ ಮಾಡಿದ ‘ಕರಿಮಣಿ ಮಾಲೀಕ ನೀನಲ್ಲ’ ವೈರಲ್ ರೀಲ್ಸ್ ಗೆ ನೊಂದ ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದದ್ದು ಗುರುವಾರ ಮುಂಜಾನೆ ಮಾಹಿತಿ ಲಭ್ಯವಾಗಿದೆ.
ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಮೃತ ದುರ್ದೈವಿ. ಮೃತ ಕುಮಾರ್ ನ ಸೋದರ ಮಹಾದೇವಸ್ವಾಮಿ ಮೃತ ಕುಮಾರ್ ಪತ್ನಿ ರೂಪಾ, ರೂಪಾಳ ಸೋದರ ಮಾವ ಗೋವಿಂದ ಹಾಗೂ ಯಶೋಧ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸೋದರ ಮಾವ ಹಾಗೂ ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದಾರೆ. ಸ್ನೇಹಿತರು ಕುಮಾರ್ ನ ಗಮನಕ್ಕೆ ತಂದ ವೇಳೆ ದಂಪತಿ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಮನನೊಂದ ಪತಿ ಕುಮಾರ್ ಮನೆ ಮುಂಭಾಗದ ಮರಕ್ಕೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹನೂರು ಆಸ್ಪತ್ರೆಗೆ ಶವವನ್ನು ರವಾನೆ ಮಾಡಲಾಗಿದ್ದು ಪೊಲೀಸರು ತನಿಖೆ ಕೈ ಗೊಂಡಿದ್ದಾರೆ