Advertisement

ಅಮ್ಮಾವ್ರ ಗಂಡನಂತಾದ ಎಚ್‌ಡಿಕೆ: ಈಶ್ವರಪ್ಪ ವ್ಯಂಗ್ಯ

06:15 AM Jul 01, 2018 | Team Udayavani |

ಶಿವಮೊಗ್ಗ: ಸಿಎಂ ಕುಮಾರಸ್ವಾಮಿ ಅಮ್ಮಾವ್ರ ಗಂಡನಂತಾಗಿದ್ದಾರೆ. ಕಾಂಗ್ರೆಸ್‌ ಅಣತಿಯಂತೆ ಆಡಳಿತ
ನಡೆಸುತ್ತಿದ್ದಾರೆ ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ವ್ಯಂಗ್ಯವಾಡಿದರು. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡತೊಡಗಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಇದುವರೆಗೂ ಟೇಕಾಫ್‌ ಆಗಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಿಂತ ನೀರಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next