ಬೆಂಗಳೂರು: ಜಮೀನು ವ್ಯಾಜ್ಯ ಸಂಬಂಧ ಕೋಣನಕುಂಟೆ ಠಾಣೆ ಪೊಲೀಸರು ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕೊತ್ತನೂರು ನಿವಾಸಿ ರಾಮಸ್ವಾಮಿ ಎಂಬವರು ಸೆ.14ರಂದು ಮೃತಪಟ್ಟಿದ್ದು, ಈ ಸಂಬಂಧ ಕೋಣ ನಕುಂಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಆದರೆ, ಪೊಲೀಸರ ಹಲ್ಲೆ ಯಿಂದಲೇ ತಮ್ಮ ಪತಿ ರಾಮಸ್ವಾಮಿ ಮೃತಪಟ್ಟಿದ್ದಾರೆ ಎಂದು ಅವರ ಪತ್ನಿ ಮುನಿಯಮ್ಮ ಆರೋಪಿಸಿದ್ದಾರೆ.
ನ್ಯಾಯ ಕಲ್ಪಿಸುವಂತೆ ಆಗ್ರಹಿಸಿ ಸಂಬಂಧಿಕರು ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಭರಮಪ್ಪ, ಜುಲೈ 17ರಂದು ಸರ್ಕಾರಿ ಕಾಮಗಾರಿಗೆ ಅಡ್ಡಿ ಪಡಿಸುತ್ತಿರುವ ಸಂಬಂಧ ನಿರ್ಮಿತಿ ಕೇಂದ್ರ ಎಂಜಿನಿಯರ್ ದೂರು ನೀಡಿದ್ದರು. ಆ ದೂರು ಆಧರಿಸಿ ರಾಮಸ್ವಾಮಿ ಕುಟುಂಬಸ್ಥರ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿತ್ತು. ರಾಮಸ್ವಾಮಿ ಅವರನ್ನು ಬಂಧಿಸಿ, ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸ ಲಾಗಿತ್ತು. ಅಂದು ಅವರು ಸಕ್ಕರೆ ಕಾಯಿಲೆ ಹಾಗೂ ಅಧಿಕ ರಕ್ತದ ಒತ್ತಡಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆದು ಕೊಂಡಿದ್ದರು. ನಂತರ, ಅವರನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗಿತ್ತು. ನ್ಯಾಯಾಲಯ ದಲ್ಲಿ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು ಎಂದು ತಿಳಿಸಿದರು.
2 ದಿನಗಳ ಹಿಂದೆ ರಾಮಸ್ವಾಮಿ ಅವರು ಮೃತಪ ಟ್ಟಿದ್ದು, ಹಲ್ಲೆಯ ಆರೋಪ ಮಾಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಮೃತದೇಹ ಮರ ಣೋತ್ತರ ಪರೀಕ್ಷೆ ನಡೆಸಲಾಗಿದೆ. ವಿಡಿಯೋ ಚಿತ್ರೀಕರಿ ಸಲಾಗಿದೆ. ವೈದ್ಯಕೀಯ ವರದಿ ಬಂದ ಬಳಿಕ ಸಾವಿಗೆ ಕಾರಣ ಗೊತ್ತಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಮೃತ ರಾಮಸ್ವಾಮಿ ಪತ್ನಿ ಮುನಿಯಮ್ಮ, ಕೋಣನಕುಂಟೆ ಇನ್‌ಸ್ಪೆಕ್ಟರ್ ಹಲ್ಲೆಯಿಂದಲೇ ಪತಿ ಮೃತಪಟ್ಟಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದಾರೆ.