Advertisement
ರಮ್ಯಾ ಶ್ರೀಧರ್ (43) ಮತ್ತು ಪುತ್ರ ಭಾರ್ಗವ್ (23) ಆತ್ಮಹತ್ಯೆ ಮಾಡಿಕೊಂಡವರು. ಪ್ರಾಥಮಿಕ ತನಿಖೆಯಲ್ಲಿ ಕೆಲವು ತಿಂಗಳ ಹಿಂದೆ ರಮ್ಯಾ ಅವರ ಪತಿ ಶ್ರೀಧರ್ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದರು. ಅದರಿಂದ ತಾಯಿ, ಮಗ ಮಾನಸಿಕ ಖನ್ನತಗೊಳಗಾಗಿದ್ದರು. ಈ ಕಾರಣಕ್ಕೆ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಹೇಳಲಾಗಿದೆ. ಯಲ ಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
19 ವರ್ಷದ ಪುತ್ರಿ ಪೇಯಿಂಗ್ ಗೆಸ್ಟ್ (ಪಿಜಿ)ಯಲ್ಲಿ ವಾಸವಾಗಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದರು. 2 ದಿನಕ್ಕೊಮ್ಮೆ ತಾಯಿಗೆ ಕರೆ ಮಾಡಿ ಮಾತಾಡುತ್ತಿದ್ದರು. ಜುಲೈ 9ರಂದು ರಾತ್ರಿ ಕರೆ ಮಾಡಿದ್ದರು. ಆಗಲೂ ತಾಯಿ ಮತ್ತು ಸಹೋದರ ಸಾಯುವ ಮಾತಾಡಿದ್ದರು ಎಂದು ಆಕೆ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ. ಅಂದೇ ರಾತ್ರಿ ಸಹೋದರಿಯ ಜತೆ ಮಾತಾಡಿದ ಭಾರ್ಗವ್ ಬಳಿಕ ಕೋಣೆಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ಆತನ ಕೋಣೆಗೆ ಹೋದ ತಾಯಿ, ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಆತನನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಬೆಡ್ ಮೇಲೆ ಮಲಗಿಸಿ ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ. ರಮ್ಯಾರ ಪುತ್ರಿ ನೀಡಿದ ದೂರಿನ ಮೇರೆಗೆ ಯಲಹಂಕ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Related Articles
ಜು. 9ರಂದು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಮನೆಯಿಂದ ಕರೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪುತ್ರಿ ಶುಕ್ರವಾರ ಸಂಜೆ ಮನೆಗೆ ಬಂದಿದ್ದರು. ಬಾಗಿಲು ಬಡಿದರೂ ಪ್ರತಿಕ್ರಿಯೆ ಬಾರದಿದ್ದಾಗ ತನ್ನ ಬಳಿಯಿದ್ದ ಮತ್ತೂಂದು ಕೀಲಿಕೈ ಬಳಸಿ ಬಾಗಿಲು ತೆರೆದಾಗ ತಾಯಿ ಮತ್ತು ಸಹೋದರ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
Advertisement