ಹಾವೇರಿ:ಪತ್ನಿಯನ್ನು ಹತ್ಯೆ ಮಾಡಿ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಂಗೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ದಾಕ್ಷಾಯಣಿ (45) ಕೊಲೆಯಾದ ಮಹಿಳೆ. ಪತಿ ಪ್ರಭು ವಾರತಿ (52) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಪತ್ನಿಯ ಮೇಲೆ ಪತಿ ಪ್ರಭು ಅನುಮಾನಗೊಂಡಿದ್ದ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು.
ಇದು ವಿಕೋಪಕ್ಕೆ ತಿರುಗಿ ಮಚ್ಚಿನಿಂದ ಪತ್ನಿಯ ಕುತ್ತಿಗೆ ಕಡಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ದಾಕ್ಷಾಯಣಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಅದೇ ರಕ್ತಸಿಕ್ತ ಕೈಯಲ್ಲಿ ಮನೆಯ ಮುಂಭಾಗದ ಕಂಬಕ್ಕೆ ನೇಣು ಹಾಕಿಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯಿಂದ ಗ್ರಾಮದ ಜನತೆ ಬೆಚ್ಚಿ ಬಿದ್ದಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.