Advertisement

ಪತ್ನಿ, ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಪತಿ

07:21 PM Mar 13, 2023 | Team Udayavani |

ಮಧುಗಿರಿ: ಅನೈತಿಕ ಸಂಬಂಧದ ಬಗ್ಗೆ ಅನುಮಾನಗೊಂಡ ಪತಿ ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ರಾತ್ರಿ ಮಲಗಿದ್ದಾಗ ಪಿಯುಸಿ, 7ನೇ ತರಗತಿ, ಹಾಗೂ 4 ನೇ ತರಗತಿ ಓದುತ್ತಿದ್ದ ಮೂವರು ಹೆಣ್ಣು ಮಕ್ಕಳು ಹಾಗೂ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಮನೆಗೆ ಬೀಗ ಹಾಕಿಕೊಂಡು ಪರಾರಿಯಾದ ಘಟನೆ ನಡೆದಿದೆ.

Advertisement

ತಾಲೂಕಿನ ಐಡಿಹಳ್ಳಿ ಹೋಬಳಿಯ ಮುದ್ದನೇರಳೆಕೆರೆ ಗ್ರಾಮದ ರಾಮಾಂಜಿನಪ್ಪ ಎಂಬುವವನೆ ಈ ಕೃತ್ಯ ನಡೆಸಿದ ಪಾಪಿಯಗಿದ್ದು, ಪತ್ನಿ ಶಾಂತಮ್ಮ ಸ್ಥಳದಲ್ಲೇ ಮೃಪಟ್ಟಿದ್ದಾಳೆ. ಮೂವರು ಹೆಣ್ಣು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಕರಣ ಮಿಡಿಗೇಶಿ ಠಾಣೆಯಲ್ಲಿ ದಾಖಲಿಸಿಕೊಳ್ಳಲಾಗಿದ್ದು ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next