Advertisement

Vitla: ಪತಿ-ಪತ್ನಿ ಆತ್ಮಹತ್ಯೆಗೆ ಯತ್ನ: ಪತಿ ಸಾವು, ಪತ್ನಿ ಗಂಭೀರ

12:12 AM Jul 02, 2023 | Team Udayavani |

ವಿಟ್ಲ: ಅನಂತಾಡಿಯ ಬಾಕಿಲದಲ್ಲಿ ಪತಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟಿದ್ದಾರೆ. ಪತ್ನಿಯನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಅನಂತಾಡಿ ಬಾಕಿಲ ನಿವಾಸಿ, ಬಸ್‌ ಚಾಲಕ ಪ್ರತಾಪ್‌ (35) ಮೃತಪಟ್ಟಿದ್ದು, ವೀಣಾ (32) ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ರಾತ್ರಿ ನೇಣು ಬಿಗಿದುಕೊಂಡಿದ್ದು, ಮಾಹಿತಿ ತಿಳಿದ ಸ್ಥಳೀಯರು ಇಬ್ಬರನ್ನೂ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರತಾಪ್‌ ಮೃತಪಟ್ಟಿರುವುದನ್ನು ವೈದ್ಯರು ದೃಢೀಕರಿಸಿದ್ದು, ಪತ್ನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾಯಿಸಿದ್ದಾರೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next