Advertisement

ಎರಡು ಕುಟುಂಬಗಳು ಹೋಮ್‌ ಕ್ವಾರಂಟೈನ್‌

06:36 PM Jun 11, 2020 | Team Udayavani |

ಹೂವಿನಹಡಗಲಿ: ತಾಲೂಕಿನ ಹೊಳಲು ಗ್ರಾಮದ ಎರಡು ಕುಟುಂಬ ಸದಸ್ಯರನ್ನು ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ. ಈ ಕುಟುಂಬದ ಸದಸ್ಯರು ಕೋವಿಡ್ ಸೋಂಕಿತ ಹಾವೇರಿ ಜಿಲ್ಲೆಯ ಗುತ್ತಲ ಗ್ರಾಮದ ಮಹಿಳೆಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ಕಾರಣ ಮುಂಜಾಗೃತಾ ಕ್ರಮವಾಗಿ ಇವರ ಮೇಲೆ ನಿಗಾ ಇಡಲಾಗಿದೆ.

Advertisement

ನಮ್ಮ ಆರೋಗ್ಯ ಸಿಬ್ಬಂದಿ ಅವರ ತಪಾಸಣೆ ನಡೆಸಲಾಗಿದ್ದು, ಯಾವುದೇ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಅಗತ್ಯ ಬಿದ್ದಲ್ಲಿ ಇವರನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗುವುದು ಎಂದು ತಹಶೀಲ್ದಾರ್‌ ವಿಜಯ್‌ಕುಮಾರ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next