Advertisement
2022ರ ಸಾಲಿನಲ್ಲಿಯೂ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರಲು ಅವಕಾಶ ನೀಡಿರಲಿಲ್ಲ. ಇದೀಗ ಶಾಲಾ, ಕಾಲೇಜುಗಳ ಸಮವಸ್ತ್ರ ನಿಯಮದಲ್ಲಿ ಹಿಜಾಬ್‌ಗ ವಿನಾಯಿತಿ ನೀಡಬಹುದೇ, ಇಲ್ಲವೇ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹಾಗೆಯೇ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ಕೋರಿ ಕೆಲ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.
ಹಿಜಾಬ್ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಸುಪ್ರೀಂ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ಆದ್ದರಿಂದ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವವರಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.