Advertisement

ಗ್ಯಾಂಗ್ ರೇಪ್ &ಮರ್ಡರ್ ಕೇಸ್; ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಸಾರ್ವಜನಿಕರ ಆಕ್ರೋಶ

08:51 AM Dec 01, 2019 | Nagendra Trasi |

ಹೈದರಾಬಾದ್;ವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ತೆಲಂಗಾಣ ಶಾದ್ ನಗರ್ ಸ್ಥಳೀಯ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Advertisement

ಪೊಲೀಸ್ ಠಾಣೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಪ್ರತಿಭಟನೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಮಹಬೂಬ್ ನಗರ್ ಫಾಸ್ಟ್ ಟ್ರ್ಯಾಕ್ ಕೋರ್ಟ್ ಗೆ ಹಾಜರುಪಡಿಸಲು ಸಾಧ್ಯವಾಗಿಲ್ಲವಾಗಿತ್ತು. ಈ ಹಿನ್ನೆಲೆಯಲ್ಲಿ ಶಾದ್ ನಗರ್ ಪೊಲೀಸ್ ಠಾಣೆಯಲ್ಲಿಯೇ ಮಂಡಲ್ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಈ ಆದೇಶವನ್ನು ನೀಡಿರುವುದಾಗಿ ವರದಿ ತಿಳಿಸಿದೆ.

ಮೊಹಮ್ಮದ್ ಆರೀಫ್, ಚಿಂಟಾಕುಂಟಾ ಚೆನ್ನಕೇಶವಲು, ಜೊಲ್ಲು ಶಿವ ಮತ್ತು ಜೊಲ್ಲು ನವೀನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳನ್ನು ಮಹಬೂಬ್ ನಗರ್ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪೊಲೀಸ್ ಠಾಣೆಯ ಹೊರಭಾಗದಲ್ಲಿ ಆಕ್ರೋಶಿತ ಭರಿತರಾಗಿ ಸ್ಥಳೀಯರು ಜಮಾವಣೆಗೊಂಡಿದ್ದರಿಂದ ಸರ್ಕಾರಿ ಆಸ್ಪತ್ರೆಯ ಮೂವರು ವೈದ್ಯರುಗಳನ್ನು ಠಾಣೆಗೆ ಕರೆಯಿಸಿಕೊಳ್ಳಲಾಗಿತ್ತು ಎಂದು ವರದಿ ತಿಳಿಸಿದೆ.

ಪ್ರತಿಭಟನಾ ನಿರತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರೂ ಸಾಧ್ಯವಾಗಿಲ್ಲವಾಗಿತ್ತು. ಪೊಲೀಸರು ಕೊನೆಗೆ ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದರು. ಮ್ಯಾಜಿಸ್ಟ್ರೇಟ್ ಅವರನ್ನು ಪೊಲೀಸ್ ಠಾಣೆಯ ಹಿಂಬಾಗಿಲಿನಿಂದ ಕರೆದುಕೊಂಡು ಬರಲಾಗಿತ್ತು. ಆರೋಪಿಗಳನ್ನು ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಸಾವಿರಾರು ಜನರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next