ಹೈದರಾಬಾದ್; ಕಳೆದ ಒಂದು ತಿಂಗಳ ಹಿಂದೆ ತೆಲಂಗಾಣದಲ್ಲಿ ರಾಜಕೀಯ ಘರ್ಷಣೆಗೆ ಕಾರಣವಾಗಿದ್ದ ಹೈದರಾಬಾದ್ ನ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪ್ರಾಪ್ತ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಚಂದ್ರು, ಹರ್ಷ, ಪ್ರವೀಣ, ನಾಳೆ ಇನ್ಯಾರೋ ? ಸಿ.ಟಿ.ರವಿ, ರೇಣುಕಾಚಾರ್ಯ ಬೇಸರ
ಪ್ರಕರಣದಲ್ಲಿ ಶಾಸಕರ ಪುತ್ರ ಸೇರಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ಜೂನ್ ಮೊದಲ ವಾರದಲ್ಲಿ ಬಂಧಿಸಲಾಗಿದ್ದು, ಇಂದು ಬಾಲಾಪರಾಧಿಗೃಹದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಲ ನ್ಯಾಯಮಂಡಳಿಯಿಂದ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿರುವ ನಾಲ್ವರು ಆರೋಪಿಗಳು ತನಿಖಾಧಿಕಾರಿಗಳಿಗೆ ಸಹಕರಿಸಬೇಕು ಮತ್ತು ಪ್ರತಿ ತಿಂಗಳ ಮೊದಲ ಸೋಮವಾರದಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಹಾಜರಾತಿ ದಾಖಲಿಸುವಂತೆ ಷರತ್ತು ವಿಧಿಸಿದೆ.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಐದನೇ ಅಪ್ರಾಪ್ತ ಆರೋಪಿ ಬಾಲಾಪರಾಧ ಗೃಹದಲ್ಲಿದ್ದು, ಜಾಮೀನಿಗಾಗಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 28ರಂದು ಹೈದರಾಬಾದ್ ನ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಕಾರಿನೊಳಗೆ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ನಡೆದಿದ್ದು, ಪ್ರಕರಣದ ಕುರಿತು ಆರು ಬಾಲಕರನ್ನು ಬಂಧಿಸಲಾಗಿತ್ತು.