Advertisement

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

11:50 AM Dec 19, 2024 | Team Udayavani |

ಇನ್ನೇನು ಹೊಸ ವರ್ಷಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿದ್ದು ಹೊಸ ವರ್ಷಾಚರಣೆಯ ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಉದ್ದೇಶದಿಂದ ಕಾರ್ಯಕ್ರಮ ಆಯೋಜಕರಿಗೆ ಹೈದರಾಬಾದ್ ಪೊಲೀಸರು ಮಾರ್ಗಸೂಚಿಗಳನ್ನು ಬಿಡುಗಡೆಮಾಡಿದ್ದಾರೆ.

Advertisement

ಈ ನಿಟ್ಟಿನಲ್ಲಿ ಬುಧವಾರ ರಾಚಕೊಂಡ ಪೊಲೀಸರು ಹೈದರಾಬಾದ್‌ನಲ್ಲಿ ನಡೆಯುವ ಹೊಸ ವರ್ಷದ ಕಾರ್ಯಕ್ರಮದ ಆಯೋಜಕರಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು. ಅದರಂತೆ ಒಳಾಂಗಣ ಮತ್ತು ಹೊರಾಂಗಣ ಸೇರಿದಂತೆ ಎಲ್ಲಾ ಕಾರ್ಯಕ್ರಮ ಸಂಘಟಕರು ಕಾರ್ಯಕ್ರಮಕ್ಕೆ ಕನಿಷ್ಠ 10 ದಿನಗಳ ಮೊದಲು ಪೊಲೀಸರಿಂದ ಅನುಮತಿ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಗಸೂಚಿಗಳ ಪ್ರಕಾರ, ಹೊರಾಂಗಣದಲ್ಲಿ ನಡೆಸುವ ಕಾರ್ಯಕ್ರಮದಲ್ಲಿ ರಾತ್ರಿ 10 ಗಂಟೆಯ ಬಳಿಕ ಜೋರಾಗಿ ಸಂಗೀತ ಹಾಕುವಂತಿಲ್ಲ, ಆದರೆ ಒಳಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು 1 ಗಂಟೆಗೆ ನಿಲ್ಲಿಸಬೇಕು. ಆ ಬಳಿಕ ಸಂಗೀತ ಹಾಕುವಂತಿಲ್ಲ ಜೊತೆಗೆ ಕಾರ್ಯಕ್ರಮ ಮುಂದುವರೆಸುವಂತಿಲ್ಲ.

ತೋಟದ ಮನೆಗಳು, ಪಬ್‌ಗಳ ಒಳಗೆ ನಡೆಯುವ ಎಲ್ಲಾ ಕಾರ್ಯಕ್ರಮಗಳು ನಿಗದಿತ ಸಮಯಕ್ಕೆ ಮುಕ್ತಾಯಗೊಳಿಸಬೇಕು ಜೊತೆಗೆ ಬಾರ್ ಮತ್ತು ರೆಸ್ಟೋರೆಂಟ್‌ಗಳು ನಿಯಮಗಳನ್ನು ಪಾಲಿಸಬೇಕು ಎಂದು ಪೊಲೀಸರು ಹೇಳಿದ್ದಾರೆ.

ಕಾರ್ಯಕ್ರಮಗಳಲ್ಲಿ ಯಾವುದೇ ಪಟಾಕಿ, ಬಂದೂಕು, ಅಥವಾ ಸ್ಪೋಟಕ ವಸ್ತುಗಳನ್ನು ಬಳಸದಂತೆ (ಸಿಡಿಸದಂತೆ) ಸಂಘಟಕರಿಗೆ ಸೂಚಿಸಲಾಗಿದೆ.

Advertisement

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಂಘಟಕರು ಪಾಸ್‌ಗಳು ಅಥವಾ ಟಿಕೆಟ್‌ಗಳನ್ನು ಮಾಡುವಂತೆ ಸೂಚಿಸಿದ್ದು ಜೊತೆಗೆ ನಿಗದಿತ ಸಂಖ್ಯೆಯಲ್ಲಿ ಮಾರಾಟ ಮಂಡುವಂತೆ ಸೂಚನೆ ನೀಡಿದೆ.

ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕಾರ್ಯಕ್ರಮ ನಡೆಯುವ ಪ್ರದೇಶದಿಂದ ಹಿಡಿದು ಪಾರ್ಕಿಂಗ್ ಸ್ಥಳದ ವರೆಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಇರಬೇಕು ಎಂದು ಕಾರ್ಯಕ್ರಮ ಸಂಘಟಕರಿಗೆ ಸೂಚನೆ ನೀಡಿದ್ದಾರೆ.

ಜನಸಂದಣಿಯನ್ನು ನಿಯಂತ್ರಿಸುವ ರೀತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಕಾರ್ಯಕ್ರಮದಿಂದ ಇತರ ವಾಹನ ಸವಾರರಿಗೆ ತೂಂದರೆಯಾಗದಂತೆ ಸಂಘಟಕರು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಇದಕ್ಕಾಗಿ ಮಹಿಳಾ ಭದ್ರತಾ ಸಿಬಂದಿಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

Advertisement

Udayavani is now on Telegram. Click here to join our channel and stay updated with the latest news.

Next