ಹೈದರಾಬಾದ್: ಚಲಿಸುತ್ತಿರುವ ಕಾರಿನ ಮೇಲೆ (ಸನ್ ರೂಫ್) ಕೂತು ಜೋಡಿಯೊಂದು ರೋಮ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಹೈದರಾಬಾದ್‌ನಲ್ಲಿರುವ ಪಿವಿ ನರಸಿಂಹರಾವ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಜೋಡಿಯ ವಿರುದ್ಧ ಇಂಟರ್ ನೆಟ್ ನಲ್ಲಿ ಆಕ್ರೋಶ ವ್ಯಕ್ತವಾಗಿದೆ.
ವೇಗವಾಗಿ ಚಲಿಸುತ್ತಿರುವ ಕಾರಿನ ಸನ್ ರೂಫ್ ಮೇಲೆ ಕೂತಿರುವ ಜೋಡಿಯೊಂದು ಪರಸ್ಪರ ಚುಂಬಿಸುತ್ತಿದ್ದು, ಲಿಪ್ ಲಾಕ್ ಮಾಡಿಕೊಂಡು ಹಾಯಾಗಿ ಹೋಗುತ್ತಿದ್ದಾರೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಸಂಚಾರ ನಿಯಮವನ್ನು ಉಲ್ಲಂಘನೆ ಮಾತ್ರವಲ್ಲದೆ, ಸ್ವಲ್ಪ ತಪ್ಪಿದರೂ ಪ್ರಾಣಕ್ಕೆ ಹಾನಿಯಾಗುವ ಸಂಭವವಿರುತ್ತಿತ್ತು ಎಂದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಹೈದರಾಬಾದ್ ಪೊಲೀಸರು ಇಂತಹ ಅಜಾಗರೂಕ ಚಾಲನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೆಲವರು ಆಗ್ರಹಿಸಿದ್ದಾರೆ.
ಸದ್ಯ ಪೊಲೀಸರು ಈ ವಿಡಿಯೋವನ್ನು ಪರಿಶೀಲಿಸಿ, ಈ ಬಗ್ಗೆ ಪ್ರತಿಕ್ರಿಯೆಯನ್ನು ಇನ್ನಷ್ಟೇ ನೀಡಬೇಕಿದೆ.