Advertisement

ಹೈ-ಕ ವಿಶೇಷ ಸ್ಥಾನಮಾನ ಪರಿಶೀಲನೆಗೆ ಸಂಪುಟ ಉಪಸಮಿತಿ

06:10 AM Aug 24, 2018 | Team Udayavani |

ಬೆಂಗಳೂರು: ಹೈದರಾಬಾದ್‌ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾಮಾನದಡಿ (371 ಜೆ) ಹೊರಡಿಸಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಷೆ ನಡೆಸಲು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ.

Advertisement

ಸಚಿವರಾದ ಬಂಡೆಪ್ಪ ಕಾಶೆಂಪೂರ, ಡಿ.ಕೆ.ಶಿವಕುಮಾರ್‌, ಕೃಷ್ಣಬೈರೇಗೌಡ, ವೆಂಕಟರಾವ್‌ ನಾಡಗೌಡ, ರಾಜಶೇಖರ ಪಾಟೀಲ್‌ ಹುಮ್ನಾಬಾದ್‌, ಆರ್‌.ಶಂಕರ್‌ ಅವರು ಸಂಪುಟ ಉಪಸಮಿತಿ ಸದಸ್ಯರಾಗಿದ್ದು, ವಿಶೇಷ ಸ್ಥಾನಮಾನದಡಿ ಹೈದರಾಬಾದ್‌ ಕರ್ನಾಟಕ ಪ್ರದೇಶಕ್ಕೆ ಸಂಬಂಧಿಸಿದಂತೆ ಹೊರಡಿಸಿದ ಆದೇಶಗಳು ಯಾವ ರೀತಿ ಜಾರಿಯಾಗುತ್ತಿದೆ? ಎಲ್ಲಿ ಲೋಪವಾಗಿದೆ ಎಂಬಿತ್ಯಾದಿ ಅಂಶಗಳನ್ನು ಪರಿಶೀಲಿಸಿ ವರದಿ ಸಿದ್ಧಪಡಿಸಲಿದೆ. ಈ ವರದಿ ಆಧರಿಸಿ ಸಮಸ್ಯೆಗಳ ಇತ್ಯರ್ಥಕ್ಕೆ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ.

ಹೈದರಾಬಾದ್‌ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಲಭ್ಯವಾದರೂ ಉದ್ಯೋಗದಲ್ಲಿ ಮೀಸಲಾತಿ ಸೇರಿದಂತೆ ಯಾವುದೇ ಸೌಲಭ್ಯಗಳು ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಈ ಕುರಿತ ಸರ್ಕಾರಿ ಆದೇಶಗಳು ಅನುಷ್ಠಾನಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇನ್ನೊಂದೆಡೆ ಉತ್ತರ ಕರ್ನಾಟಕಕ್ಕೆ ಅನ್ಯಾಯ ಎಂಬ ಕೂಗೂ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆಗಳ ಇತ್ಯರ್ಥಕ್ಕೆ ಸಂಪುಟ ಉಪಸಮಿತಿ ರಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next