Advertisement
ಮೃತ ಮಹಿಳೆಯನ್ನು ಹೈದರಾಬಾದ್ ಮೂಲದ ಚೈತನ್ಯ ಮದಗಣಿ (೩೬) ಎನ್ನಲಾಗಿದ್ದು ಈಕೆಯ ಶವ ಶನಿವಾರ ಆಸ್ಟ್ರೇಲಿಯಾದ ಬಕ್ಲಿಯ ರಸ್ತೆಯ ಬದಿಯಲ್ಲಿ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ.
Related Articles
ಇತ್ತ ಮಗಳ ಸಾವಿನ ಸುದ್ದಿ ಹಬ್ಬುತ್ತಿದ್ದಂತೆ ಚೈತನ್ಯ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ ಅಲ್ಲದೆ ತನ್ನ ಮಗಳ ದೇಹವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.
Advertisement
ಅಶೋಕ್ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬ: ಚೈತನ್ಯ ಸಾವಿನ ಸುದ್ದಿ ಗೊತ್ತಾಗುತ್ತಿದ್ದಂತೆ ಚೈತನ್ಯ ಪೋಷಕರು ಅಳಿಯನ ವಿರುದ್ಧವೇ ಅನುಮಾನ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ, ಅಲ್ಲದೆ ಪತ್ನಿ ಸಾವಿನ ಬಳಿಕ ಪತಿ ಭಾರತಕ್ಕೆ ಓಡಿ ಬಂದಿರುವ ವಿಚಾರದಲ್ಲಿ ಪತಿಯೇ ಈ ಕೃತ್ಯ ಎಸಗಿ ಪರಾರಿಯಾಗಿದ್ದಾನೆ ಎಂದು ಆರೋಪ ಮಾಡಲಾಗಿದೆ. ಘಟನೆ ಸಂಬಂಧ ಉಪ್ಪಳ ಶಾಸಕ ಬಂಡಾರಿ ಲಕ್ಷ್ಮ ರೆಡ್ಡಿ ಮಾತನಾಡಿ, ಮಹಿಳೆ ತನ್ನ ಕ್ಷೇತ್ರದವಳಾದ ಕಾರಣ, ವಿಷಯ ತಿಳಿದ ನಂತರ ಇಂದು ಆಕೆಯ ಪೋಷಕರನ್ನು ಭೇಟಿ ಮಾಡಿದ್ದೇನೆ ಮಹಿಳೆಯ ಪೋಷಕರ ಕೋರಿಕೆಯ ಮೇರೆಗೆ ಮಹಿಳೆಯ ಮೃತದೇಹವನ್ನು ಹೈದರಾಬಾದ್‌ಗೆ ತರಲು ವಿದೇಶಾಂಗ ಕಚೇರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರ ಕಚೇರಿಗೂ ತಿಳಿಸಿರುವುದಾಗಿ ಶಾಸಕರು ಹೇಳಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಯಾರನ್ನೂ ಬಂಧಿಸಿಲ್ಲ, ತನಿಖೆ ನಡೆಯುತ್ತಿದೆ. ಇದನ್ನೂ ಓದಿ: Oscar Awards 2024: ʼಓಪನ್ ಹೈಮರ್ʼ To.. ಇಲ್ಲಿದೆ ಆಸ್ಕರ್ ವಿಜೇತರ ಪಟ್ಟಿ