Advertisement
ಏಪ್ರಿಲ್ ನಿಂದ ಜೂನ್ ತಿಂಗಳ ಅವಧಿಯಲ್ಲಿ ದೇಶದಲ್ಲಿ ಬಿಸಿಗಾಳಿ ಉಂಟಾಗುವ ಸಾಧ್ಯತೆಗಳ ಬಗ್ಗೆ ಭಾರತೀಯ ಹವಮಾನ ಇಲಾಖೆಯೂ ಮಾಹಿತಿ ನೀಡಿದ್ದು ರಾಜ್ಯದ ನೆರೆಯ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಈ ಬಾರಿ ಬಿಸಿಗಾಳಿಯ ಸಂಭವ ಹೆಚ್ಚಾಗಿದೆ.ಈ ಭಾಗಕ್ಕೆ ಹೊಂದಿಕೊಂಡಿರುವ ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಲ್ಲಿ ಹಾಗು ಉತ್ತರ ಒಳನಾಡು ಪ್ರದೇಶದಲ್ಲಿ ವಾತಾವರಣದ ವೈಪರೀತ್ಯದಿಂದ ಉಂಟಾಗುವ ಬಿಸಿಗಾಳಿ ಎದುರಿಸಲು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯನ್ನ ಕಳುಹಿಸಿದೆ.
Related Articles
Advertisement
ಬಿಸಿಗಾಳಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ, ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮದ ಬಗ್ಗೆ ರಿವು ಮೂಡಿಸಲು, ತಾಪಮಾನ 40 ಡಿಗ್ರಿ ಗಿಂತ ಅಧಿಕವಾಗಿದ್ದಲ್ಲಿ ಬೆಳಿಗ್ಗೆ 11ರಿಂದ ಸಂಜೆ 4 ಗಂಟೆಯ ತನಕ ಜನರು ಮನೆಯಿಂದ ಹೊರಗಡೆ ಬಿಸಿಲಿನಲ್ಲಿ ಓಡಾಡದಂತೆ ಎಚ್ಚರಿಕೆ ವಹಿಸಬೇಕೆಂದು ಕಾರ್ಯಯೋಜನೆಯಲ್ಲಿ ಸೂಚಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಸರ್ಕಾರಿ ಕಚೇರಿ,ಶಾಲೆ ಕಾಲೇಜು ಅವಧಿ ಬದಲಾವಣೆ ಜೊತೆಗೆ ಉದ್ಯೋಗ ಖಾತರಿ ಯೋಜನೆ ಕೆಲಸದ ಅವಧಿ ಕಡಿತಗೊಳಿಸಬೇಕು. ಬಿಸಿಲಿನ ಅವಧಿ ಹೊರತುಪಡಿಸಿ ತಂಪು ಹೊತ್ತಿನಲ್ಲಿ ಕೆಲಸದ ಸಮಯ ನಿಗದಿಪಡಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ ಜನತೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆಯೂ ಕಾರ್ಯಯೋಜನೆಯಲ್ಲಿ ತಿಳಿಸಲಾಗಿದೆ.ಆರೋಗ್ಯ ಇಲಾಖೆಯು ಬಿಸಿಗಾಳಿಯಿಂದ ಹಾನಿಗೊಳಗಾದ ಜನರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧಿಗಳನ್ನು ದಾಸ್ತಾನಿಟ್ಟುಕೊಳ್ಳಲು ಸಹಕಾರ್ಯಯೋಜನೆಯಲ್ಲಿ ಸಲಹೆ ನೀಡಲಾಗಿದೆ.