ಮೈಸೂರು: ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ. ಜನರು ಇದಕ್ಕೆ ವಂತಿಗೆ ನೀಡುತ್ತಿದ್ದಾರೆ. ಅದರ ವೆಚ್ಚ ಎಷ್ಟು ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಜನರ ಧಾರ್ಮಿಕ ನಂಬಿಕೆ. ಎಲ್ಲಾ ಕಡೆ ರಾಮ ಮಂದಿರ ಕಟ್ಟುತ್ತಾರೆ ಅದರಲ್ಲೇನಿದೆ. ದೇವರು ಎನ್ನುವುದು ಜನರಿಗೆ ಭಯ ಭಕ್ತಿಯ ಸಂಕೇತ. ಇದನ್ನು ಅವರು ರಾಜಕಾರಣಕ್ಕೆ ಬಳಸುತ್ತಾರೆ ಎಂದರು.
ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ಸಂಗ್ರಹದ ಬಗ್ಗೆ ಮಾತನಾಡಿದ ಅವರು, ಜನರು ರಾಮ ಮಂದಿರಕ್ಕೆ ದೇಣಿಗೆ ನೀಡುತ್ತಿದ್ದಾರೆ. ಅದು ಬಿಜೆಪಿಗಾಗಿ ಅಲ್ಲ. ಲೆಕ್ಕ ಕೇಳುವ ಅಧಿಕಾರ ನನಗೆ ಇದೆ ಎಂದರು.
ಇದನ್ನೂ ಓದಿ:ಜನರ ರಾಮಮಂದಿರಕ್ಕೆ ದೇಣಿಗೆ ನೀಡುತ್ತಿದ್ದಾರೆ ಅದು ಬಿಜೆಪಿಗಾಗಿ ಅಲ್ಲ: ಸಿದ್ದರಾಮಯ್ಯ
ನಾನು ಈ ದೇಶದ ಪ್ರಜೆ, ನಾನು ದುಡ್ಡು ಕೊಡಲಿ ಬಿಡಲಿ. ಲೆಕ್ಕ ಕೊಡಬೇಕಾಗಿರುವುದು ಅವರ ಕೆಲಸ, ಕೇಳುವುದು ನಮ್ಮ ಹಕ್ಕು. ಲೆಕ್ಕೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಹಣ ದುರುಪಯೋಗವಾಗುತ್ತಿದೆ ಅದರ ಅರ್ಥ ಎಂದು ಸಿದ್ದರಾಮಯ್ಯ ಆರೋಪಿಸಿದರು.