Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರ ಕ್ಷೇತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ಹೆಸರು ಪ್ರಸ್ತಾಪವಾಗಿದೆ. ಅದು ಒಳ್ಳೆಯದೆ. ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದರು.
Related Articles
Advertisement
ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ- ಟಿಎಸ್‌ಪಿ ಹಣ ಬಳಕೆ ವಿಚಾರವನ್ನು ಸಮರ್ಥನೆ ಮಾಡಿದ ವಿಶ್ವನಾಥ್, ಅಗತ್ಯ ಇರುವ ಕಡೆಗೆ ಅನುದಾನ ಬಳಸಿಕೊಳ್ಳಲು ಸರ್ಕಾರಕ್ಕೆ ಅನುವಂಶೀಯವಾದ ಅಧಿಕಾರ ಇದೆ. ಅದನ್ನೇ ಬಿಜೆಪಿ, ಜೆಡಿಎಸ್‌ನವರು ದೊಡ್ಡದಾಗಿ ಬೊಬ್ಬೆ ಹೊಡೆಯುತ್ತಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ದಲಿತರಿಗೆ ಏನು ಮಾಡಿದ್ದರು ಎಂದು ಪ್ರಶ್ನಿಸಿದರು.
ನಾನೂ ಜೆಡಿಎಸ್ ರಾಜ್ಯಾಧ್ಯಕ್ಷ ಆಗಿದ್ದೆ. ಸಮ್ಮಿಶ್ರ ಸರ್ಕಾರದಲ್ಲಿ 12 ಸಚಿವ ಸ್ಥಾನ ಸಿಕ್ಕಿತ್ತು. ಇದರಲ್ಲಿ 7 ಸಚಿವರು ಕುಮಾರಸ್ವಾಮಿ ಮನೆಯವರೇ ಆಗಿದ್ದರು. ಬಂಡೆಪ್ಪ ಕಾಶಂಪೂರ್ ಒಬ್ಬ ಕುರುಬ, ಇನ್ನಿಬ್ಬರು ಲಿಂಗಾಯತರು. ಎರಡು ಸಚಿವ ಸ್ಥಾನ ಖಾಲಿಯೇ ಇತ್ತು. ದಲಿತರು ಹಾಗೂ ಮುಸ್ಲಿಮರಿಗೆ ಕೊಡಿ ಎಂದು ಕೇಳಿದ್ದೆ. ಖಾಲಿ ಬಿಟ್ಟರೆ ಹೊರತು ದಲಿತರಿಗೆ ಸಚಿವ ಸ್ಥಾನ ಸಿಗಲಿಲ್ಲ. ಅಂಥವರು ಈಗ ದಲಿತರ ಉದ್ಧಾರದ ಬಗ್ಗೆ ಮಾತನಾಡುತ್ತಾರೆ ಎಂದರು.
ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ನೊಂದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಹೋರಾಟ ವೀರೇಂದ್ರ ಹೆಗ್ಗಡೆ ವಿರುದ್ಧ ಅಲ್ಲ ಎಂದು ಹೇಳಿದರು.