Advertisement

ನಾನೂ ಲೋಕಸಭಾ ಟಿಕೆಟ್‌ ಆಕಾಂಕ್ಷಿ: ಬಿವೈಆರ್‌

06:25 AM Jul 23, 2018 | |

ಶಿರಾಳಕೊಪ್ಪ: ಬಿಜೆಪಿಯಲ್ಲಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷದ ನಿಷ್ಠಾವಂತ ಕಾರ್ಯರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಆದರೆ, ಪಕ್ಷ ಬಯಸಿದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಶಾಸಕ ಬಿ.ವೈ.ರಾಘವೇಂದ್ರ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ನಾನೂ ಸಹ ಲೋಕಸಭಾ ಟಿಕೆಟ್‌ ಆಕಾಂಕ್ಷಿಯಾಗಿದ್ದು ಪಕ್ಷ ಅವಕಾಶ ಮಾಡಿಕೊಟ್ಟಲ್ಲಿ ಸ್ಪರ್ಧಿಸುತ್ತೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೇನೆ. ಈ ಹಿಂದೆ ಲೋಕಸಭಾ ಸದಸ್ಯನಾಗಿ, ವಿಧಾನಸಭೆ ಸದಸ್ಯನಾಗಿ ಕಾರ್ಯ ನಿರ್ವಹಿಸಿದ್ದೇನೆ. ಪುನ: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next