Advertisement
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಮಹತ್ವದ ಕಾರ್ಯ ಮಾಡುವ ಮುನ್ನ ವಿಜಯನಗರ ಕ್ಷೇತ್ರದ ಆರಾಧ್ಯದೈವ ಶ್ರೀ ಹಂಪಿ ವಿರುಪಾಕ್ಷೇಶ್ವರ ದರ್ಶನ ಪಡೆದು ಮುಂದುವರಿಯುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ಉಪಚುನಾವಣೆಗೆ ಮುನ್ನ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಕೊಡು ಎಂದು ಪಂಪಾ ವಿರುಪಾಕ್ಷೇಶ್ವರ ಹಾಗೂ ತಾಯಿ ಭುವನೇಶ್ವರಿ ದೇವಿಗೆ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ಈ ಮೂಲಕ ವಿಜಯನಗರ ಜಿಲ್ಲೆ ಆಗಬೇಕೆಂದು ಸಂಕಲ್ಪ ಮಾಡಿದ್ದೇನೆ ಎಂದರು.
ಪಕ್ಷದ ಹಿರಿಯ ಮುಖಂಡ ಶ್ರೀರಾಮುಲು ಮತ್ತು ನನ್ನ ಸಂಬಂಧ ಚೆನ್ನಾಗಿದೆ.ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಕೆಲ ವಿಷಯಗಳ ಬಗ್ಗೆ ಅವರೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳುತ್ತೇನೆ. ಎಂದಿಗೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ಶ್ರೀರಾಮುಲು ಹಿರಿಯ ನಾಯಕರು. ನನಗೆ ಅವಕಾಶ ಸಿಕ್ಕರೆ ಅವರನ್ನೇ ಮುಂದೆ ಬಿಟ್ಟು ನಾನು ಹಿಂದೆ ಇರುತ್ತೇನೆ. ಬಳ್ಳಾರಿ ಜಿಲ್ಲಾ ಚುನಾವಣಾ ಉಸ್ತುವಾರಿಯನ್ನು ಶ್ರೀರಾಮುಲು ಅವರಿಗೆ ನೀಡಲು ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದೇನೆ. ಅವರೇ ಚುನಾವಣೆ ಉಸ್ತುವಾರಿ ವಹಿಸುತ್ತಾರೆಂಬ ವಿಶ್ವಾಸವಿದೆ ಎಂದರು.