Advertisement

Elections ನನಗೆ ಗೆಲ್ಲುವ ವಿಶ್ವಾಸವಿದೆ: ಡಾ| ಸಿ.ಎನ್‌.ಮಂಜುನಾಥ್‌

08:39 PM Jun 01, 2024 | Team Udayavani |

ರಾಮನಗರ: ಎಂಟು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲೂ ಒಳ್ಳೆಯ ಫೀಡ್‌ ಬ್ಯಾಕ್‌ ಬಂದಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನನಗೆ ಗೆಲ್ಲುವ ವಿಶ್ವಾಸವಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌ ತಿಳಿಸಿದರು.

Advertisement

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾರಂಭದಲ್ಲಿ ಹೇಗಿತ್ತೋ ಅದೇ ರೀತಿಯ ಬೆಂಬಲ ಇಂದಿಗೂ ಇದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲರೂ ನೀವು ಗೆಲ್ಲುತ್ತೀರಿ ಆರಾಮವಾಗಿರಿ ಎನ್ನುತ್ತಿದ್ದಾರೆ. ಮುನ್ನಡೆ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂಬ ನಂಬಿಕೆ ಇದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next