Advertisement

ಮೈಸೂರಿನ ಐಎಎಸ್ ಅಧಿಕಾರಿಗಳ ಸಂಘರ್ಷ ನನ್ನ ಕೈ ಮೀರಿದೆ: ಅಸಹಾಯಕತೆ ತೋರಿದ ಸಚಿವ ಸೋಮಶೇಖರ್

01:35 PM Jun 04, 2021 | Team Udayavani |

ಮೈಸೂರು: ಜಿಲ್ಲೆಯಲ್ಲಿ ಈ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಸಂಘರ್ಷ ಸಾಕಷ್ಟು ಸದ್ಧು ಮಾಡಿದ್ದು, ಇದು ನನ್ನ ಕೈಮೀರಿದೆ, ಅಧಿಕಾರಿಗಳ ಸಂಘರ್ಷ ನನ್ನ ವ್ಯಾಪ್ತಿಯಲ್ಲಿ ಉಳಿದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅಸಹಾಯಕತೆ ವ್ಯಕ್ತಪಡಿಸಿದರು.

Advertisement

ನಗರದಲ್ಲಿ ಇಂದು ಮಾತನಾಡಿದ ಅವರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಪಾಲಿಕೆಯ ಆಯುಕ್ತರಾದ ಶಿಲ್ಪಾನಾಗ್ ಸಂಘರ್ಷ ಕುರಿತು ಎಲ್ಲವನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವರು ತಿಳಿಸಿದರು.

ನಾನು ಯಾರು ಸರಿ ಯಾರು ತಪ್ಪು ಅಂತ ಹೇಳುವುದಿಲ್ಲ. ಇಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಮೈಸೂರಿಗೆ ಬರುತ್ತಿದ್ದಾರೆ. ಅವರ ಗಮನಕ್ಕೆ ತಂದಿದ್ದೇವೆ. ಅವರು ಬಂದಾದ ನಂತರ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದರು.

ಇದನ್ನೂ ಓದಿ:‘ಕೇರ್’ ಇಲ್ಲದ ಸೆಂಟರ್: ಅವ್ಯವಸ್ಥೆಯ ಆಗರವಾದ ಸಿಎಂ ತವರು ಜಿಲ್ಲೆಯ ಕೋವಿಡ್ ಕೇರ್ ಸೆಂಟರ್

ಕೋವಿಡ್ ನಿಯಂತ್ರಣ ಮಾಡೋದು ನನ್ನ ಆದ್ಯತೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ಮೈಸೂರು ಕಳೆದ ಒಂದು ವರ್ಷದಿಂದ ಕೋವಿಡ್ ನಿಂದ ನರಳುತ್ತಿದೆ. ಬೆಂಗಳೂರು ಹೊರತುಪಡಿಸಿದರೆ ಮೈಸೂರಿನಲ್ಲಿ ಅತಿ ಹೆಚ್ಚು ಕೋವಿಡ್ ಸಮಸ್ಯೆಯಿದೆ. ಮೈಸೂರಿನ ಜನರ ಹಿತದೃಷ್ಟಿಯಿಂದ ಕೋವಿಡ್ ಹೇಗೆ ನಿಯಂತ್ರಣಕ್ಕೆ ತರಬಹುದೆಂಬ ಚಿಂತನೆಯನ್ನು ಹೊರತುಪಡಿಸಿದರೆ ಮಿಕ್ಕ ಯಾವುದೂ ಡೈರೆಕ್ಷನ್ ಕುರಿತು ಮಾತನಾಡುವುದು ಇಲ್ಲ ಎಂದರು.

Advertisement

ಜಿಲ್ಲೆಯಲ್ಲಿ ಕೋವಿಡ್ ಕಡಿಮೆ ಮಾಡುತ್ತಿದ್ದೇವೆ. ಇಷ್ಟೆಲ್ಲ ಒಳ್ಳೆಯ ಕೆಲಸ ಮಾಡಿದರೂ ಕೂಡ ನನ್ನ ಮನಸ್ಸಿಗೆ ನೋವಾಗಿದೆ. ಮೈಸೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಎಲ್ಲರ ಅಭಿಪ್ರಾಯ ಪಡೆದು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ, ಅದಕ್ಕೂ ತೊಂದರೆಯಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕೆ ಮಾತ್ರ, ವಿನಃ ಬೇರೆ ಸಣ್ಣಪುಟ್ಟದ್ದಕ್ಕೆ ಗಮನ ಕೊಡುವಷ್ಟು ವ್ಯವದಾನ ಇಲ್ಲ. ಮೈಸೂರಿನ ಜನತೆ ಗೌರವಯುತವಾಗಿ ಇದ್ದಾರೆ. ಅವರ ಗೌರವದ ವಿರುದ್ಧ ನಾನು ಹೋಗುವುದಿಲ್ಲ. ಅಧಿಕಾರಿಗಳ ವಿಷಯ ಉಸ್ತುವಾರಿ ಸಚಿವರಿಗೂ ಮೀರಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಮುಖ್ಯಕಾರ್ಯದರ್ಶಿಗಳ ಗಮನಕ್ಕೂ ತಂದಿದ್ದೇವೆ. ಸರಿಪಡಿಸುವುದಾಗಿ ಹೇಳಿದ್ದಾರೆಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next