ಕುಮಟಾ: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಅನಂತಕುಮಾರ ಹೆಗಡೆ ಎಲ್ಲಿದ್ದಿಯಪ್ಪಾ ಎಂಬತ್ತಾಗುತ್ತದೆ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದರು. ನಾನು ಜನರ ಮಧ್ಯದಲ್ಲಿಯೇ ಇದ್ದೇನೆ. ಆದರೆ ಮುಖ್ಯಮಂತ್ರಿಗಳು ತಮ್ಮ ಮಗ ಮತ್ತು ಅಪ್ಪನನ್ನು ಹುಡುಕಿಕೊಂಡು ಬರಲಿ ಎಂದು ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಂಸದ ಅನಂತಕುಮಾರ ಹೆಗಡೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
ದೇಶದಲ್ಲಿಯೇ ಅತ್ಯಂತ ಹೆಚ್ಚಿನ ಬಹುಮತ ಪಡೆದ ಸ್ಥಾನಗಳಲ್ಲಿ ಉತ್ತರಕನ್ನಡ ಜಿಲ್ಲೆಯ ಬಿಜೆಪಿಯೂ ಒಂದು. ಉತ್ತರ ಕನ್ನಡದಷ್ಟು ಕಡಿಮೆ ಖರ್ಚಿನಲ್ಲಿ ಯಾವ ಕ್ಷೇತ್ರದ ಚುನಾವಣೆಯೂ ನಡೆದಿಲ್ಲ. ನನ್ನನ್ನು ಬಹುಮತದಿಂದ ಆರಿಸಿ ತರಲು ಶ್ರಮಿಸಿದಂತಹ ಶಾಸಕರು, ಮುಖಂಡರು, ಕಾರ್ಯಕರ್ತರು, ಹಲವಾರು ಸಂಘಟನೆಗಳು ಹಾಗೂ ಮತದಾರರಿಗೆ ನಾನು ಅಭಿನಂದಿಸುತ್ತೇನೆ. ಇದರಿಂದಾಗಿ ನನ್ನ ಜವಾಬ್ದಾರಿ ಹೆಚ್ಚಿದೆ. ಜನಪ್ರತಿನಿಧಿಗಳು ಮತದಾರರ ಪ್ರೀತಿ ಮತ್ತು ವಿಶ್ವಾಸವನ್ನು ಗಳಿಸಿದರೆ ಅಸಾಧ್ಯವಾದದ್ದೂ ಸಾಧ್ಯವಾಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ. ಇವತ್ತಿನ ಬಿಜೆಪಿಯ ದಾಖಲೆಯನ್ನು ಮುಂದಿನ ದಿನಗಳಲ್ಲಿಯೂ ಉಳಿಸಿಕೊಳ್ಳುವುದು ಜನರ ಮೇಲಿದೆ ಎಂದರು.
ಶಾಸಕ ದಿನಕರ ಶೆಟ್ಟಿ ಮಾತನಾಡಿ, ಐದು ವರ್ಷಗಳ ಪ್ರಧಾನಿ ಮೋದಿಯವರ ಆಡಳಿತ ಹಲವಾರು ಸಾಧನೆಯ ಜೊತೆ ದೇಶ ಭದ್ರತೆಯ ಹಿತದೃಷ್ಟಿಯಿಂದ ಸಾಕಷ್ಟು ಯೋಜನೆಯನ್ನು ಜಾರಿಗೆ ತಂದಿದೆ. ಜಿಲ್ಲೆಯ ಜನತೆ ಮೋದಿಯವರನ್ನು ಹಾಗೂ ಅನಂತಕುಮಾರ ಹೆಗಡೆಯವರನ್ನು ಒಪ್ಪಿಕೊಂಡಿದ್ದಾರೆ ಎಂಬುದಕ್ಕೆ ಇದೊಂದು ನಿದರ್ಶನ. ರಾಜ್ಯದಲ್ಲಿ ಇಷ್ಟೊಂದು ಬಹುಮತಗಳ ಗೆಲುವು ಇದೇ ಮೊದಲ ಬಾರಿ ಎಂದು ಹರ್ಷ ವ್ಯಕ್ತಪಡಿಸಿದರು.
ಕಿತ್ತೂರು ಶಾಸಕ ದೊಡ್ಡಗೌಡ್ರು ಮಾತನಾಡಿ, ಅನಂತಕುಮಾರ ಹೆಗಡೆ ಹಾಗೂ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು.
Advertisement
ಗುರುವಾರ ಮತ ಎಣಿಕೆ ನಂತರ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಗೆಲುವಿನ ಸಂಭ್ರಮಾಚರಣೆ ಸಭೆಯಲ್ಲಿ ಅವರು ಮಾತನಾಡಿದರು.
Related Articles
Advertisement