Advertisement

ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರ ಸಂಪರ್ಕದಲ್ಲಿದ್ದೇನೆ; ಸಿಎಂ ಬೊಮ್ಮಾಯಿ

01:00 PM Dec 20, 2022 | Team Udayavani |

ಬೆಳಗಾವಿ: ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರೊಂದಿಗೆ  ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕ ವಾಗಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.

ಸಿಬಿಐ ದಾಳಿ: ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಉತ್ತರಿಸಿ ಸಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆ ಅವರ ಬಳಿ ಇರುವ ಪ್ರಕರಣ ಇದೆ ಅದರ ಮೇಲೆ ಅವರು ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ್ ಅವರಿಗೂ ತಿಳಿದಿರುವ ವಿಚಾರ ಎಂದರು.

ಹಲಾಲ್ ಕಟ್: ಹಾಲಾಲ್ ಕುರಿತು ಸುದ್ದಿದಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಲಾಲ್ ವಿಷಯಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next