Advertisement
ಒಳಕಾಡು ದೈವಜ್ಞ ಮಂದಿರದಲ್ಲಿ ಗುರುವಾರ ನಡೆದ ಉಡುಪಿ ನಗರಸಭೆ ವ್ಯಾಪ್ತಿಯ ಒಳಕಾಡು ವಾರ್ಡ್ ಮಟ್ಟದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದೇ ಸಂದರ್ಭ ಸಚಿವರು ಅರ್ಹ ಫಲಾನುಭವಿ ಗಳಿಗೆ ವಿವಿಧ ಪಿಂಚಣಿ, ಸವಲತ್ತುಗಳನ್ನು ವಿತರಿಸಿದರು. ಗ್ರಾಮಸ್ಥರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದ ಸಚಿವರು ಬಹುತೇಕ ಅರ್ಜಿಗಳಿಗೆ ವಿವಿಧ ಇಲಾಖಾಧಿಕಾರಿಗಳ ಮುಖಾಂತರ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು. ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹ ಮೂರ್ತಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ಒಳಕಾಡು ವಾರ್ಡ್ ಸದಸ್ಯೆ ಗೀತಾ ರವಿ ಶೇಟ್, ನಗರಸಭೆ ಸದಸ್ಯರಾದ ರಮೇಶ್ ಕಾಂಚನ್, ನಾರಾಯಣ ಕುಂದರ್, ಜನಾರ್ದನ್ ಭಂಡಾರ್ಕರ್, ಗಣೇಶ್ ನೇರ್ಗಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜನಾರ್ದನ್, ನಗರಾಶ್ರಯ ಸಮಿತಿಯ ವಿಘ್ನೇಶ್ ಆಚಾರ್ಯ, ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಉಪಸ್ಥಿತರಿದ್ದರು.
Related Articles
Advertisement
ಉಡುಪಿಗೆ ವಿಶೇಷ ಅನುದಾನಹೆಚ್ಚಿನ ಅನುದಾನಗಳಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದರೂ ಇನ್ನಷ್ಟು ಅಭಿವೃದ್ಧಿ ಮಾಡುವ ಉದ್ದೇಶದಿಂದ ಆಸ್ಕರ್ ಫೆರ್ನಾಂಡಿಸ್ ಅವರ ಶಿಫಾರಸಿನ ಮೇರೆಗೆ 10 ಕೋ.ರೂ. ಮಂಜೂರಾತಿ ಸೇರಿದಂತೆ ಒಟ್ಟು 18 ಕೋ.ರೂ. ವಿಶೇಷ ಅನುದಾನ ಮಂಜೂರು ಮಾಡಿಸುವಲ್ಲಿ ಶ್ರಮಿಸಿದ್ದೇನೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ನಿರಂತರ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಜನಮಾನಸದಲ್ಲಿ ಅಚ್ಚೊತ್ತಿ ನಿಂತಿದೆ. ಇದುವರೆಗೆ 500 ರೂ. ವೃದ್ಧಾಪ್ಯ ವೇತನ ನೀಡಲಾಗುತ್ತಿತ್ತು, ಇದೀಗ ಸಿದ್ದರಾಮಯ್ಯನವರು 750 ರೂ.ಗೆ ಏರಿಸುವ ಮೂಲಕ ಬಡವರ, ವೃದ್ಧರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ. ರೈತರ ಕಷ್ಟಕ್ಕೆ ನೆರವಾಗುವ ಉದ್ದೇಶದಿಂದ ರೈತರ ಸಾಲ ಮನ್ನಾ ಮಾಡಿದ ನೆಲೆಯಲ್ಲಿ ರಾಜ್ಯದ 22,27,506 ರೈತರಿಗೆ ಅನುಕೂಲವಾಗಿದೆ ಎಂದರು. ಉಡುಪಿಯಲ್ಲಿ ಹೈಟೆಕ್ ಬಸ್ ನಿಲ್ದಾಣ
ಉಡುಪಿಯಲ್ಲಿ ಸುಸಜ್ಜಿತವಾದ (ಹೈಟೆಕ್) ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ನರ್ಮ್ ಬಸ್ ನಿಲ್ದಾಣ, ಉಡುಪಿ ಸಿಟಿ ಬಸ್ ನಿಲ್ದಾಣ, ಮಣಿಪಾಲ ಮತ್ತು ಮಲ್ಪೆಯಲ್ಲಿ ಸುಸಜಿತj ಬಸ್ ನಿಲ್ದಾಣ ರಚನೆಗೆ 34 ಕೋ. ರೂ. ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಲಾಗಿದ್ದು, ಈ ಕಾರ್ಯವನ್ನು ಪಟ್ಟು ಹಿಡಿದು ಶೀಘ್ರವಾಗಿ ಕೈಗೆತ್ತಿಕೊಳ್ಳಲಾಗುವುದು. ನಿರಂತರ ಕುಡಿಯುವ ನೀರಿಗಾಗಿ ಶೀಂಬ್ರ ದಲ್ಲಿ ಅಣೆಕಟ್ಟು ಕಟ್ಟಲಾಗುವುದು ಎಂದರು.