Advertisement

Lok Sabha Elections; ನಾನು ಲೋಕಸಭಾ ಟಿಕೆಟ್‌ ಆಕಾಂಕ್ಷಿ ಅಲ್ಲ: ರಾಮದಾಸ್‌

07:21 PM Jan 09, 2024 | Team Udayavani |

ಶಿವಮೊಗ್ಗ: ಮುಂದಿನ ಲೋಕಸಭಾ ಚುನಾವಣೆಗೆ ನಾನು ಟಿಕೆಟ್‌ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ರಾಮದಾಸ್‌ ಸ್ಪಷ್ಟಪಡಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ನಾನು ಸ್ಪ ರ್ಧಿಸುವುದಿಲ್ಲ. ನನಗೆ ಈಗಾಗಲೇ 2 ಜವಾಬ್ದಾರಿಗಳನ್ನು ನೀಡಲಾಗಿದೆ. ಅದನ್ನು ಸಂತೋಷದಿಂದ ನಿಭಾಯಿಸುತ್ತಿದ್ದೇನೆ. ಪಿಎಂ ಸ್ವನಿಧಿ-ವಿಶ್ವಕರ್ಮ ಯೋಜನೆಗಳ ಪ್ರಗತಿ ಬಗ್ಗೆ ಮಾತನಾಡಲು ಶಿವಮೊಗ್ಗಕ್ಕೆ ಬಂದಿದ್ದೇನೆ. ನನ್ನ ಕ್ಷೇತ್ರ ಮುಖ್ಯಮಂತ್ರಿಗಳ ತವರು ಜಿಲ್ಲೆಯಾಗಿದೆ. ಅಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಗೆಲ್ಲಲು ಬಿಡುವುದಿಲ್ಲ. ಬಿಜೆಪಿಯನ್ನೇ ಗೆಲ್ಲಿಸುತ್ತೇವೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next