Advertisement

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ರಾಜೀವ್‌

11:10 PM Feb 12, 2020 | Lakshmi GovindaRaj |

ದಾವಣಗೆರೆ: ಸಚಿವ ಸ್ಥಾನಮಾನ, ಖಾತೆ ಹಂಚಿಕೆ ಕುರಿತು ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಕುಡುಚಿ ಶಾಸಕ ಪಿ. ರಾಜೀವ್‌ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಪಮುಖ್ಯಮಂತ್ರಿ ಹುದ್ದೆ ವಿಚಾರದಲ್ಲೂ ಯಾವುದೇ ಗೊಂದಲವಿಲ್ಲ. ಆರೋಗ್ಯ ಸಚಿವ ಶ್ರೀರಾಮುಲು ಎಲ್ಲಿಯೂ ತಮ್ಮನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕೇಳಿಲ್ಲ.

Advertisement

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಇದೇ ಮೊದಲ ಬಾರಿಗೆ ಬಿಜೆಪಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಪಕ್ಷದ ಸಿದ್ಧಾಂತದಡಿ ನಿಷ್ಠೆ ತೋರಬೇಕಿದೆ. ನಾನಂತೂ ಸಚಿವ ಸ್ಥಾನದ ಆಕಾಂಕ್ಷಿಯೇ ಅಲ್ಲ. ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರದ ರಚನೆಯಲ್ಲಿ ಬೆಳಗಾವಿ ಜಿಲ್ಲೆ ಪ್ರಮುಖ ಪಾತ್ರ ವಹಿಸಿದೆ. ಸಹಜವಾಗಿಯೇ ಬೆಳಗಾವಿ ಜಿಲ್ಲೆಗೆ ಹೆಚ್ಚಿನ ಸಚಿವ ಸ್ಥಾನ ನೀಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next