Advertisement

JDS: ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ ಅಲ್ಲ: ನಿಖೀಲ್‌

11:44 PM Feb 11, 2024 | Pranav MS |

ಬೆಂಗಳೂರು: ನಾನು ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಅಲ್ಲ. ನಾನು ಯೂ ಟರ್ನ್ ಹೊಡೆಯುವ ಗಿರಾಕಿ ಅಲ್ಲ. 2019ರಲ್ಲಿ ಕ್ಷೇತ್ರದ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ, ಕಾರ್ಯಕರ್ತರ ಪ್ರೀತಿ ಇದೆ ಎಂದು ನಿಖೀಲ್‌ ಕುಮಾರಸ್ವಾಮಿ ಹೇಳಿದರು.

Advertisement

ಪಕ್ಷದ ರಾಜ್ಯ ಕಚೇರಿಐಲ್ಲಿ ಜೆಡಿಎಸ್‌ ಡಿಜಿಟಲ್‌ ಯೋಧರ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಜೆಡಿಎಸ್‌-ಬಿಜೆಪಿ ಮೈತ್ರಿಯನ್ನು ಬಲಪಡಿಸಬೇಕು, ಮತ್ತೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು. ಹೀಗಾಗಿ ನನ್ನ ಗಮನ ರಾಜ್ಯದ 28 ಲೋಸಭೆ ಕ್ಷೇತ್ರಗಳ ಕಡೆಯೂ ಇರುತ್ತದೆ ಎಂದು ನಿಖೀಲ್‌ ಕುಮಾರಸ್ವಾಮಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next