Advertisement

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

11:25 PM May 07, 2024 | Team Udayavani |

ಬಳ್ಳಾರಿ: ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ ಎಂದು ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

Advertisement

ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತಗಟ್ಟೆಯಲ್ಲಿ ಕುಟುಂಬ ಸಮೇತ ಮಂಗಳವಾರ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಎಂಬುದು ದೊಡ್ಡ ಹಬ್ಬವಿದ್ದಂತೆ. ಯುವಕರೆಲ್ಲ ಆಗಮಿಸಿ ಮತದಾನದಲ್ಲಿ ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಬೇಕು. ಈ ಮೂಲಕ ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಮತದಾನ ಮಾಡಬೇಕು. ಉತ್ತಮರನ್ನು ಆಯ್ಕೆ ಮಾಡುವ ಕೆಲಸ ಯುವ ಮತದಾರರು ಮಾತನಾಡಿದರು. ದೇಶಾದ್ಯಂತ ವಾತಾವರಣ ಚೆನ್ನಾಗಿದೆ. ಮೋದಿ ಗಾಳಿ, ಯಡಿಯೂರಪ್ಪ ಸಂಕಲ್ಪವಿದೆ. ಪ್ರಜ್ವಲ್‌ ಪ್ರಕರಣಗಳ ತನಿಖೆಯನ್ನು ತನಿಖಾ ಸಂಸ್ಥೆಗಳು ಮಾಡುತ್ತಿವೆ. ಈ ಸಂದರ್ಭದಲ್ಲಿ ಮಾತನಾಡುವುದು ಸರಿಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next