ವಾಷಿಂಗ್ಟನ್: 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ.
“ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಘೋಷಿಸುತ್ತಿದ್ದೇನೆ” ಎಂದು ಅವರು ಹೇಳಿದರು.
2016 ರಲ್ಲಿ ರಿಪಬ್ಲಿಕನ್ ಪಕ್ಷದಿಂದ ಸ್ಪರ್ದಿಸಿ ಹಿಲರಿ ಕ್ಲಿಂಟನ್ ವಿರುದ್ಧ ಗೆಲುವು ಸಾಧಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿಕೊಂಡಿದ್ದರು ಆದರೆ 2020 ರ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸತತ ಎರಡನೇ ಅವಧಿಗೆ ಅಧ್ಯಕ್ಷರಾಗುವ ಭರವಸೆಯಲ್ಲಿ ಸ್ಪರ್ಧಿಸಿದ್ದ ಡೊನಾಲ್ಡ್ ಟ್ರಂಪ್ ಅವರು ಜೋ ಬೈಡನ್ ಎದುರು ಸೋಲನ್ನು ಅನುಭವಿಸಿದ್ದಾರೆ, ಅದರ ನೋವು ಇನ್ನು ಮನಸ್ಸಿನಲ್ಲಿ ಇದ್ದು ಮುಂದೆ ನಡೆಯುವ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಈಗಿನಿಂದಲೇ ನಡೆಸುವುದಾಗಿ ತಿಳಿಸಿದ್ದಾರೆ, ಇದರೊಂದಿಗೆ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ.
2024 ರಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆ ಭಾರೀ ಮಹತ್ವ ಪಡೆದಿದ್ದು ಮತ್ತೆ ಟ್ರಂಪ್ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಲಿದ್ದಾರಾ ಕಾದುನೋಡಬೇಕಾಗಿದೆ.
ಇದನ್ನೂ ಓದಿ : ಮೀನುಗಾರಿಕೆಯಲ್ಲಿ ರಾಜ್ಯವನ್ನು ನಂ. 1 ಆಗಿಸುವ ಗುರಿ: ಸಚಿವ ಅಂಗಾರ